April 14, 2026
Tuesday, April 14, 2026
spot_img

ಕಾಂಗ್ರೆಸ್ ತುಷ್ಟೀಕರಣ ನೀತಿಯೇ ಗಲಭೆಗೆ ಕಾರಣ: ಪ್ರಹ್ಲಾದ್ ಜೋಶಿ ಕಿಡಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಯಚೂರಿನ ಹಟ್ಟಿ ಪಟ್ಟಣದಲ್ಲಿ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಬಾಗಲಕೋಟೆಯ ಘಟನೆಯನ್ನು ಮುಂದಿಟ್ಟುಕೊಂಡು ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. “ನಿಮ್ಮ ಸರ್ಕಾರ ಅಧಿಕಾರಕ್ಕೆ ಬಂದಾಗಲೆಲ್ಲಾ ಇಂತಹ ಘಟನೆಗಳು ಯಾಕೆ ಮರುಕಳಿಸುತ್ತವೆ?” ಎಂದು ಅವರು ನೇರವಾಗಿ ಪ್ರಶ್ನಿಸಿದ್ದಾರೆ.

ಪೊಲೀಸರಿಗೆ ಮುಕ್ತವಾಗಿ ಕೆಲಸ ಮಾಡಲು ಬಿಟ್ಟರೆ ಇಂತಹ ಘಟನೆಗಳು ನಡೆಯುವುದಿಲ್ಲ. ಆದರೆ ಕಾಂಗ್ರೆಸ್ ಸರ್ಕಾರ ಅಧಿಕಾರಿಗಳ ಮೇಲೆ ಒತ್ತಡ ಹೇರುತ್ತಿದೆ.

ಮತ ಬ್ಯಾಂಕ್‌ಗಾಗಿ ಒಂದು ವರ್ಗವನ್ನು ಓಲೈಸುವ ಕಾಂಗ್ರೆಸ್‌ನ ‘ತುಷ್ಟೀಕರಣ ನೀತಿ’ಯಿಂದಲೇ ಇಂತಹ ಅಹಿತಕರ ಘಟನೆಗಳು ಸಂಭವಿಸುತ್ತಿವೆ.

ಬಾಂಬ್ ಹಾಕುವವರನ್ನು ‘ಬ್ರದರ್ಸ್’ ಎನ್ನುತ್ತೀರಿ, ಗಣೇಶೋತ್ಸವ ಮತ್ತು ಶಿವಾಜಿ ಮೆರವಣಿಗೆಯ ಮೇಲೆ ಕಲ್ಲು ತೂರಾಟ ನಡೆಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತಿಲ್ಲ. ಬದಲಿಗೆ ಅಕ್ರಮಗಳ ಬಗ್ಗೆ ದನಿ ಎತ್ತುವವರ ಮೇಲೆ ಕೇಸ್ ಹಾಕಲಾಗುತ್ತಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !