Saturday, August 30, 2025

ಸಿಲಿಕಾನ್​ ಸಿಟಿಯಲ್ಲಿ ವರುಣನಾಗಮನ: ಹಬ್ಬದ ಖುಷಿಯಲ್ಲಿದ್ದ ಮಂದಿಗೆ ಬ್ರೇಕ್ ಕೊಟ್ಟ ಮಳೆರಾಯ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಸಿಲಿಕಾನ್​ ಸಿಟಿಯಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಗಣೇಶ ಹಬ್ಬದ ಖುಷಿಯಲ್ಲಿದ್ದ ಸಿಟಿ ಮಂದಿಗೆ ಮಳೆರಾಯ ಕೊಂಚ ಬ್ರೇಕ್ ಕೊಟ್ಟಿದ್ದಾನೆ. ಲಾಲ್ ಬಾಗ್, ಶಾಂತಿ ನಗರ, ಕೆಆರ್​ ಮಾರ್ಕೆಟ್, ಟೌನ್​ ಹಾಲ್​, ಮೆಜೆಸ್ಟಿಕ್ ಸುತ್ತ ಮುತ್ತ ಧಾರಾಕಾರವಾಗಿ ಮಳೆಯಾಗಿದೆ.

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಆಗಸ್ಟ್ 31ರವರೆಗೆ ಕರ್ನಾಟಕದ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಈಗಾಗಲೇ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿರುಸಿನ ಮಳೆಯಾಗುತ್ತಿದೆ. ಮತ್ತೊಂದು ಕಡೆ ಕಲ್ಯಾಣ ಕರ್ನಾಟಕ ಭಾಗದಲ್ಲೂ ಧಾರಾಕಾರ ಮಳೆಯಾಗುತ್ತಿದೆ.

ಇದನ್ನೂ ಓದಿ