ಹೊಸದಿಗಂತ ಡಿಜಿಟಲ್ ಡೆಸ್ಕ್:
ದೆಹಲಿಯ ಮುಖರ್ಜಿ ನಗರ ಪ್ರದೇಶದಲ್ಲಿ ಎರಡು ವರ್ಷದ ಬಾಲಕನ ಹತ್ಯೆ ಪ್ರಕರಣ ಬೆಳಕಿಗೆ ಬಂದಿದೆ. ಎಸ್‌ಎಫ್‌ಎಸ್ ಫ್ಲಾಟ್‌ಗಳ ಸಮೀಪದ ಉದ್ಯಾನವನದಲ್ಲಿ ಈ ಘಟನೆ ನಡೆದಿದ್ದು, ಮಗುವಿನ ಚಿಕ್ಕಮ್ಮನನ್ನೇ ಪೊಲೀಸರು ಬಂಧಿಸಿದ್ದಾರೆ.
ಮೃತ ಬಾಲಕ ಹಾದಿ ತನ್ನ ತಾಯಿ ಜೊತೆ ಅಜ್ಜಿಯ ಮನೆಗೆ ಬಂದಿದ್ದನು. ಮಧ್ಯಾಹ್ನ ವೇಳೆ ತಾಯಿಯ ತಂಗಿ ಅಜ್ರಾ ಮಗುವನ್ನು ಉದ್ಯಾನವನಕ್ಕೆ ಕರೆದುಕೊಂಡು ಹೋಗಿದ್ದಾಳೆ. ಅಲ್ಲಿ ಮಗುವನ್ನು ಕತ್ತು ಹಿಸುಕಿ ಕೊಂದಿರುವ ಆರೋಪ ಕೇಳಿಬಂದಿದೆ. ಘಟನೆ ಬಳಿಕ ಆಕೆ ಮಗುವಿನ ಶವವನ್ನು ಮಡಿಲಲ್ಲಿ ಇಟ್ಟುಕೊಂಡೇ ಉದ್ಯಾನವನದಲ್ಲಿ ಕುಳಿತಿದ್ದಾಳೆ.
ಇದನ್ನೂ ಓದಿ:
ಈ ದೃಶ್ಯ ಕಂಡ ಸ್ಥಳೀಯರು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಧಾವಿಸಿದ ಪೊಲೀಸರು ಮಹಿಳೆಯಿಂದ ಶವವನ್ನು ವಶಕ್ಕೆ ಪಡೆಯಲು ಪ್ರಯತ್ನಿಸಿದಾಗ, ಆಕೆ ಬಿಡಲು ನಿರಾಕರಿಸಿದ್ದಾಳೆ ಎನ್ನಲಾಗಿದೆ. ಬಳಿಕ ಮನವೊಲಿಸಿ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.
ಪೊಲೀಸರು ಅಜ್ರಾಳನ್ನು ಬಂಧಿಸಿದ್ದು, ಹತ್ಯೆಗೆ ಕಾರಣವೇನು ಎಂಬುದರ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ವೈಯಕ್ತಿಕ ದ್ವೇಷವೇ ಕಾರಣವೇ ಎಂಬ ಅನುಮಾನವೂ ವ್ಯಕ್ತವಾಗಿದೆ. ಘಟನೆಯಿಂದ ಪ್ರದೇಶದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.



