ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಾಲ ಬಾಧೆಯಿಂದ ಬಳಲುತ್ತಿದ್ದ ದಂಪತಿಯು ತಮ್ಮ 4 ತಿಂಗಳ ಮಗುವಿಗೆ ವಿಶಪ್ರಾಶನ ಮಾಡಿ ಕೊನೆಗೆ ತಾವೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉತ್ತರ ಪ್ರದೇಶದ ಶಹಜಹಾನ್‌ಪುರದಲ್ಲಿ ನಡೆದಿದೆ.
ಬೆಳಗ್ಗೆ ಮೂವರ ಶವಗಳು ಪ್ರತ್ಯೇಕ ಕೋಣೆಗಳಲ್ಲಿ ಕಂಡುಬಂದಿವೆ. ಸಚಿನ್ ಗ್ರೋವರ್ (30) ಮತ್ತು ಅವರ ಪತ್ನಿ ಶಿವಾನಿ (28) ಗಂಡು ಮಗು ಫತೇಹ್ ಮೃತ ದುರ್ದೈವಿಗಳು.
ಸ್ಥಳದಲ್ಲಿ ಡೆತ್‌ನೋಟ್ ಪತ್ತೆಯಾಗಿದ್ದು. ಅದರಲ್ಲಿ ಸಚಿನ್ ಸಾಲದ ಹೊರೆ ಮತ್ತು ಆದಾಯದ ಕೊರತೆಯಿಂದ ತೀವ್ರ ನೊಂದಿರುವುದಾಗಿ ಬರೆದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.