February 21, 2026
Saturday, February 21, 2026
spot_img

ರಾಷ್ಟ್ರಪತಿ ಭವನದಲ್ಲಿ ಬ್ರೆಜಿಲ್ ಅಧ್ಯಕ್ಷರಿಗೆ ಭವ್ಯ ಸ್ವಾಗತ: ಎರಡು ದೇಶಗಳ ಬಾಂಧವ್ಯಕ್ಕೆ ಹೊಸ ಅಧ್ಯಾಯ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ನವದೆಹಲಿಯ ರಾಷ್ಟ್ರಪತಿ ಭವನದಲ್ಲಿ ಬ್ರೆಜಿಲ್ ಅಧ್ಯಕ್ಷ ಲೂಲಾ ಅವರಿಗೆ ಗೌರವಪೂರ್ಣ ಸ್ವಾಗತ ನೀಡಲಾಯಿತು. ಗಾರ್ಡ್ ಆಫ್ ಆನರ್ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಹಾಗೂ ಪ್ರಧಾನಿ ನರೇಂದ್ರ ಮೋದಿ ಉಪಸ್ಥಿತರಿದ್ದು ಆತ್ಮೀಯವಾಗಿ ಬರಮಾಡಿಕೊಂಡರು. ಈ ಭೇಟಿ ಭಾರತ–ಬ್ರೆಜಿಲ್ ಸಂಬಂಧಗಳಿಗೆ ಮತ್ತಷ್ಟು ಬಲ ನೀಡಲಿದೆ ಎಂದು ಅಂದಾಜಿಸಲಾಗಿದೆ.

ಭೇಟಿಯ ಭಾಗವಾಗಿ ಲೂಲಾ ಅವರು ನವದೆಹಲಿಯಲ್ಲಿ ಬ್ರೆಜಿಲ್‌ನ ವ್ಯಾಪಾರ ಮತ್ತು ಹೂಡಿಕೆ ಉತ್ತೇಜನ ಸಂಸ್ಥೆ ಅಪೆಕ್ಸ್ ಬ್ರೆಜಿಲ್‌ ನ ಮೊದಲ ಕಚೇರಿಯನ್ನು ಉದ್ಘಾಟಿಸಿದರು. ಈ ಕಚೇರಿ ಬ್ರೆಜಿಲಿಯನ್ ಉತ್ಪನ್ನಗಳಿಗೆ ಜಾಗತಿಕ ಮಾರುಕಟ್ಟೆ ಒದಗಿಸುವುದರ ಜೊತೆಗೆ ವಿದೇಶಿ ಹೂಡಿಕೆ ಆಕರ್ಷಿಸುವ ಗುರಿ ಹೊಂದಿದೆ.

ಇದನ್ನೂ ಓದಿ:

ಲೂಲಾ ಈ ಬಾರಿ 11ಕ್ಕೂ ಹೆಚ್ಚು ಸಚಿವರು ಹಾಗೂ ನೂರಾರು ಉದ್ಯಮಿಗಳನ್ನೊಳಗೊಂಡ ದೊಡ್ಡ ನಿಯೋಗದೊಂದಿಗೆ ಭಾರತಕ್ಕೆ ಆಗಮಿಸಿದ್ದಾರೆ. ವ್ಯಾಪಾರ, ಹೂಡಿಕೆ ಮತ್ತು ತಂತ್ರಜ್ಞಾನ, ವಿಶೇಷವಾಗಿ ಕೃತಕ ಬುದ್ಧಿಮತ್ತೆ ಕ್ಷೇತ್ರಗಳಲ್ಲಿ ಸಹಕಾರ ವಿಸ್ತರಿಸುವ ಕುರಿತು ಚರ್ಚೆಗಳು ನಡೆಯಲಿವೆ. ಎರಡೂ ರಾಷ್ಟ್ರಗಳ ಸ್ನೇಹ ಮತ್ತಷ್ಟು ಗಾಢವಾಗುವ ನಿರೀಕ್ಷೆಯಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !