April 15, 2026
Wednesday, April 15, 2026
spot_img

ವಿರೋಧಿಗಳಿಗೆ ಹೆದರಿ ರಣರಂಗ ಬಿಟ್ಟು ಓಡಿಹೋಗೋ ಹೇಡಿ ನಾನಲ್ಲ: ಸಿಎಂ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:
ವಿರೋಧಿಗಳಿಗೆ ಹೆದರಿ ರಣರಂಗ ಬಿಟ್ಟು ಓಡಿಹೋಗುವ ಹೇಡಿ ನಾನಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಸಾಮಾಜಿಕ ದಿನದ ಪ್ರಯುಕ್ತ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿ, ಸಾಮಾಜಿಕ ನ್ಯಾಯಕ್ಕಾಗಿ ನನ್ನ ಉಸಿರು ಇರುವವರೆಗೂ ಹೋರಾಡುತ್ತೇನೆ ಎಂದಿದ್ದಾರೆ.

ಸಾಮಾಜಿಕ ನ್ಯಾಯಕ್ಕಾಗಿ ನನ್ನ ಉಸಿರಿರುವ ವರೆಗೆ ಹೋರಾಡುತ್ತೇನೆ. ನನ್ನ ನಾಲ್ಕು ದಶಕಗಳ ರಾಜಕೀಯ ಜೀವನ ಎಂದಿಗೂ ಹೂವಿನ ಹಾಸಿಗೆ ಆಗಿರಲಿಲ್ಲ. ಅದು ಕಲ್ಲು-ಮುಳ್ಳುಗಳ ಹಾದಿಯಾಗಿತ್ತು. ನನ್ನನ್ನು ರಾಜಕೀಯವಾಗಿ ಮುಗಿಸಲು ಹಲವಾರು ದೊಡ್ಡದೊಡ್ಡ ನಾಯಕರು ಹಲವಾರು ಬಗೆಯ ಕುಟಿಲ ಕಾರಸ್ತಾನಗಳನ್ನು ಮಾಡಿದ್ದಾರೆ. ಅವುಗಳನ್ನೆಲ್ಲವನ್ನೂ ಜನತೆಯ ಆಶೀರ್ವಾದದಿಂದ ಗೆದ್ದು ಬಂದಿದ್ದೇನೆ.

ಇದು ನನ್ನ ವಿರುದ್ಧ ನಡೆಯುತ್ತಿರುವ ಷಡ್ಯಂತ್ರಗಳಲ್ಲ. ಇದು ನನ್ನನ್ನು ನಂಬಿರುವ, ಪ್ರೀತಿಸುತ್ತಿರುವ, ನನಗೆ ನಿರಂತರವಾಗಿ ಆಶೀರ್ವಾದ ನೀಡಿ ಬೆಂಬಲಿಸುತ್ತಿರುವ ನಿಮ್ಮ ವಿರುದ್ಧ ನಡೆಯುತ್ತಿರುವ ಷಡ್ಯಂತ್ರ ಎನ್ನುವುದು ನನಗೆ ಚೆನ್ನಾಗಿ ಗೊತ್ತು. ಆದ್ದರಿಂದ ನನ್ನ ಉಸಿರು ಇರುವವರೆಗೆ ಈ ರಾಜಕೀಯ ಷಡ್ಯಂತ್ರ, ದ್ವೇಷ-ಅಸೂಯೆಯ ರಾಜಕಾರಣದ ವಿರುದ್ಧ ಹೋರಾಡುತ್ತೇನೆ. ಇದು ಸತ್ಯ, ನ್ಯಾಯ ಮತ್ತು ಧರ್ಮಕ್ಕಾಗಿ ನಡೆಯುತ್ತಿರುವ ಹೋರಾಟ. ನಿಮ್ಮೆಲ್ಲರ ಬೆಂಬಲದೊಂದಿಗೆ ಈ ಹೋರಾಟವನ್ನು ನನ್ನ ಉಸಿರು ಇರುವವರೆಗೆ ನಡೆಸುತ್ತೇನೆ. ರಣರಂಗವನ್ನು ಬಿಟ್ಟು ಓಡಿ ಹೋಗುವ ಹೇಡಿ ನಾನಾಗಲಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !