ಹೊಸದಿಗಂತ ಡಿಜಿಟಲ್ ಡೆಸ್ಕ್:
ನಟ ದರ್ಶನ್ ಅವರ ಹೆಸರಿನಲ್ಲಿ ಅವರ ಅಭಿಮಾನಿಗಳು ಮಾಡುತ್ತಿರುವ ಸಮಾಜಮುಖಿ ಕೆಲಸಗಳು ಈಗ ಎಲ್ಲರ ಗಮನ ಸೆಳೆಯುತ್ತಿವೆ. ಪ್ರಸ್ತುತ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್ ಅವರಿಗೆ ಹೊರಗಿನ ವಿದ್ಯಮಾನಗಳ ಬಗ್ಗೆ ಪತ್ನಿ ವಿಜಯಲಕ್ಷ್ಮೀ ಹಾಗೂ ನಟ ಧನ್ವೀರ್ ಮಾಹಿತಿ ನೀಡುತ್ತಿದ್ದಾರೆ.
ದರ್ಶನ್ ಅವರ ಹುಟ್ಟುಹಬ್ಬದ ಅಂಗವಾಗಿ ಅವರ ಅಭಿಮಾನಿಗಳು ರಾಜ್ಯಾದ್ಯಂತ ಹಲವು ಜನಪಯೋಗಿ ಕಾರ್ಯಗಳನ್ನು ಹಮ್ಮಿಕೊಂಡಿದ್ದರು. ಈ ಎಲ್ಲಾ ಸತ್ಕಾರ್ಯಗಳ ಸುಂದರ ಕ್ಷಣಗಳನ್ನು ಒಗ್ಗೂಡಿಸಿ, ದರ್ಶನ್ ಅವರ ಅಧಿಕೃತ ಸೋಶಿಯಲ್ ಮೀಡಿಯಾ ಖಾತೆಗಳಲ್ಲಿ ಹಂಚಿಕೊಳ್ಳಲಾಗಿದೆ.
“ಈ ಪುಣ್ಯ ಕಾರ್ಯದಲ್ಲಿ ಪಾಲ್ಗೊಂಡ ನನ್ನೆಲ್ಲಾ ಸೆಲೆಬ್ರಿಟಿಗಳಿಗೆ ಧನ್ಯವಾದಗಳು” ಎಂಬ ಸಂದೇಶದ ಮೂಲಕ ದರ್ಶನ್ ಅವರು ತಮ್ಮ ಪ್ರೀತಿಯನ್ನು ವ್ಯಕ್ತಪಡಿಸಿದ್ದಾರೆ.



