February 21, 2026
Saturday, February 21, 2026
spot_img

ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಪ್ರತಿಭಟನೆ: ನಾಲ್ವರು ಯುವ ಕಾಂಗ್ರೆಸ್ ಕಾರ್ಯರ್ತರು 5 ದಿನ ಪೊಲೀಸ್ ಕಸ್ಟಡಿಗೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ದೆಹಲಿಯಲ್ಲಿ ನಡೆದ ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಮೋದಿ-ಟ್ರಂಪ್ ವಿರುದ್ಧ ಘೋಷಣೆ ಕೂಗುತ್ತಾ ಮೆರವಣಿಗೆ ನಡೆಸಿದ ನಾಲ್ವರು ಯುವ ಕಾಂಗ್ರೆಸ್ ಕಾರ್ಯರ್ತರನ್ನು ಪಟಿಯಾಲ ಹೌಸ್ ನ್ಯಾಯಾಲಯ 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದೆ.

ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರು ಎಐ ಶೃಂಗಸಭೆಯಲ್ಲಿ ಗಲಭೆ ಸೃಷ್ಟಿಸಲು ಪಿತೂರಿ ನಡೆಸಿದ್ದರು ಎಂದು ಪೊಲೀಸ್ ತನಿಖೆ ವೇಳೆ ಬಯಲಾಗಿದೆ. ಟಿ-ಶರ್ಟ್‌ಗಳನ್ನು ಕೈಯಲ್ಲಿ ಹಿಡಿದು ಬೀಸುವ ಮೂಲಕ ಯುವ ಕಾಂಗ್ರೆಸ್ ಕಾರ್ಯಕರ್ತರು ಮೆರವಣಿಗೆ ನಡೆಸಿ ಪ್ರತಿಭಟನೆ ನಡೆಸಿದ್ದರು. ಈ ವೇಳೆ ಅವರನ್ನು ಬಂಧಿಸಲಾಗಿತ್ತು.

ಬಂಧಿತ ಯುವ ಕಾಂಗ್ರೆಸ್ ಕಾರ್ಯಕರ್ತರನ್ನು 5 ದಿನಗಳ ಕಸ್ಟಡಿಗೆ ನೀಡುವಂತೆ ದೆಹಲಿ ಪೊಲೀಸರು ನ್ಯಾಯಾಲಯದ ಮುಂದೆ ಕೋರಿದ್ದರು. ದೇಶವನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ತಲೆತಗ್ಗಿಸುವಂತೆ ಮಾಡಲು ಸಂಚು ರೂಪಿಸಲಾಗುತ್ತಿದೆ ಎಂದು ಪೊಲೀಸರು ಪಟಿಯಾಲ ಹೌಸ್ ನ್ಯಾಯಾಲಯಕ್ಕೆ ತಿಳಿಸಿದ್ದರು. ಇದಾದ ಬಳಿಕ ನ್ಯಾಯಾಲಯವು ಆರೋಪಿಗಳನ್ನು 5 ದಿನಗಳ ಪೊಲೀಸ್ ಕಸ್ಟಡಿಗೆ ನೀಡಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !