February 21, 2026
Saturday, February 21, 2026
spot_img

ಮದುವೆ ಭರವಸೆ ನೀಡಿ ಲೈಂಗಿಕ ದೌರ್ಜನ್ಯ: ಪೊಲೀಸ್‌ ಬಲೆಗೆ ಬಿದ್ದ ಇನ್‌ಫ್ಲುಯೆನ್ಸರ್‌!

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಹಲವು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಕೇರಳದ ಸಾಮಾಜಿಕ ಮಾಧ್ಯಮ ಇನ್‌ಫ್ಲುಯೆನ್ಸರ್‌ನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸೋಶಿಯಲ್‌ ಮೀಡಿಯಾದಲ್ಲಿ ವಿಶ್ವಾಸ ಗಳಿಸಿದ ನಂತರ ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಆರೋಪಿಸಿ ಮಹಿಳೆಯೊಬ್ಬರು ದೂರು ನೀಡಿದ್ದಾರೆ. ದೂರಿನ ಮೇರೆಗೆ ಕಾರ್ಯಾಚರಿಸಿದ ಪೊಲೀಸರು ತ್ರಿಶೂರ್ ನಿವಾಸಿ ಯದು ಗಿರೀಶ್ (38) ಎಂಬಾತನನ್ನು ವಶಕ್ಕೆ ಪಡೆದಿದ್ದಾರೆ.

ತನಿಖೆಯ ಸಮಯದಲ್ಲಿ, ಮತ್ತಿಬ್ಬರು ಮಹಿಳೆಯರು ಆತನ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ. ಸಾಮಾಜಿಕ ಮಾಧ್ಯಮದಲ್ಲಿ ತಮ್ಮೊಂದಿಗೆ ಸ್ನೇಹ ಬೆಳೆಸಿದ್ದಾನೆ. ನಂತರ ಮದುವೆಯ ಭರವಸೆ ನೀಡಿ ತಮ್ಮ ಮೇಲೆ ಹಲ್ಲೆ ನಡೆಸಿದ್ದಾನೆ ಎಂದು ಆರೋಪಿಸಿದ್ದಾರೆ.

ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್) ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸಂಬಂಧಿತ ನಿಬಂಧನೆಗಳ ಅಡಿಯಲ್ಲಿ ಗಿರೀಶ್ ವಿರುದ್ಧ ಹಲವು ಪ್ರಕರಣಗಳು ದಾಖಲಾಗಿವೆ. ಸಹಾಯಕ ಪೊಲೀಸ್ ಆಯುಕ್ತರ ಮೇಲ್ವಿಚಾರಣೆಯಲ್ಲಿ ತ್ರಿಶೂರ್ ಜಿಲ್ಲಾ ಅಪರಾಧ ವಿಭಾಗದ ತಂಡವು ತನಿಖೆಯ ನೇತೃತ್ವ ವಹಿಸಿದೆ ಎಂದು ಅಧಿಕಾರಿಗಳು ದೃಢಪಡಿಸಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !