ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಒಣಹವೆಯ ವಾತಾವರಣ ಮುಂದುವರಿದಿದ್ದರೂ, ಇಂದು ದಕ್ಷಿಣ ಒಳನಾಡಿನ ಕೆಲ ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ವಿಶೇಷವಾಗಿ ಕೆಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.
ದಕ್ಷಿಣ ಕನ್ನಡ, ಚಾಮರಾಜನಗರ, ಕೊಡಗು, ಮೈಸೂರು ಹಾಗೂ ಮಂಡ್ಯ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಚಾಮರಾಜನಗರ, ಹಾಸನ, ಕೊಡಗು ಮತ್ತು ಮೈಸೂರು ಭಾಗಗಳಲ್ಲಿ ರಾತ್ರಿ ವೇಳೆಯಲ್ಲಿ ಗಂಟೆಗೆ 30ರಿಂದ 40 ಕಿಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಇಲಾಖೆ ಎಚ್ಚರಿಸಿದೆ.
ಇದನ್ನೂ ಓದಿ:
ಇನ್ನೊಂದೆಡೆ, ಕರಾವಳಿ ಪ್ರದೇಶಗಳಾದ ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ. ಉತ್ತರ ಒಳನಾಡಿನ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಸಹ ಮಳೆಯ ಲಕ್ಷಣಗಳಿಲ್ಲ ಎಂದು ತಿಳಿಸಲಾಗಿದೆ.
ಬೆಂಗಳೂರು ನಗರದಲ್ಲಿ ಇಂದು ಕನಿಷ್ಠ ತಾಪಮಾನ 18 ಡಿಗ್ರಿ ಸೆಲ್ಸಿಯಸ್ ಹಾಗೂ ಗರಿಷ್ಠ 31 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಮೋಡ ಕವಿದ ವಾತಾವರಣ ಕಂಡುಬರುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.



