ಹೊಸದಿಗಂತ ಡಿಜಿಟಲ್ ಡೆಸ್ಕ್:
2026ರ ಟಿ20 ವಿಶ್ವಕಪ್‌ನಲ್ಲಿ ಭಾರತ ತಂಡ ಮೊದಲ ಹಂತದ ಎಲ್ಲಾ ಪಂದ್ಯಗಳನ್ನು ಗೆದ್ದು ಸೂಪರ್ 8ಕ್ಕೆ ಪ್ರವೇಶಿಸಿದೆ. ಎರಡನೇ ಸುತ್ತಿನ ಮೊದಲ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾವನ್ನು ಎದುರಿಸಲು ಸಜ್ಜಾಗಿರುವ ವೇಳೆಯಲ್ಲಿ, ಅಭಿಷೇಕ್ ಶರ್ಮಾ ಅವರ ನಿರಂತರ ವೈಫಲ್ಯ ಚರ್ಚೆಗೆ ಕಾರಣವಾಗಿದೆ.
ಈ ಟೂರ್ನಿಯಲ್ಲಿ ಆಡಿದ ಮೂರು ಪಂದ್ಯಗಳಲ್ಲೂ ಅಭಿಷೇಕ್ ಸೊನ್ನೆಗೆ ಔಟಾಗಿದ್ದಾರೆ. ಮೊದಲ ಪಂದ್ಯ ನಂತರ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ಅವರು ಬಳಿಕ ತಂಡಕ್ಕೆ ಮರಳಿದರೂ ಬ್ಯಾಟ್‌ನಿಂದ ರನ್ ಹರಿದುಬಂದಿಲ್ಲ. ಕಳೆದ ಒಂದು ವರ್ಷದಲ್ಲಿ ಭರವಸೆ ಮೂಡಿಸಿದ್ದ ಈ ಯುವ ಆಟಗಾರನಿಂದ ದೊಡ್ಡ ನಿರೀಕ್ಷೆ ಇತ್ತು.
ಇದನ್ನೂ ಓದಿ:
ಸೂಪರ್ 8 ಆರಂಭಕ್ಕೂ ಮುನ್ನ ನಡೆದ ಸುದ್ದಿಗೋಷ್ಠಿಯಲ್ಲಿ ನಾಯಕ ಸೂರ್ಯಕುಮಾರ್ ಯಾದವ್ ಅವರನ್ನು ಅಭಿಷೇಕ್ ಫಾರ್ಮ್ ಕುರಿತು ಪ್ರಶ್ನಿಸಲಾಯಿತು. ಇದಕ್ಕೆ ಪ್ರತಿಕ್ರಿಯಿಸಿದ ಅವರು, ಅಭಿಷೇಕ್ ಬಗ್ಗೆ ತಮಗೆ ಯಾವುದೇ ಚಿಂತೆ ಇಲ್ಲ ಎಂದು ಸ್ಪಷ್ಟಪಡಿಸಿದರು. ಕಳೆದ ವರ್ಷ ತಂಡಕ್ಕೆ ಮಹತ್ವದ ಕೊಡುಗೆ ನೀಡಿದ ಆಟಗಾರನ ಬೆನ್ನಿಗೆ ನಿಲ್ಲುವುದು ಈಗ ನಮ್ಮ ಕರ್ತವ್ಯ ಎಂದು ಹೇಳಿದರು.
ಒಂದು ತಿಂಗಳಲ್ಲಿ ಐದು ಬಾರಿ ಸೊನ್ನೆಗೆ ಔಟಾದರೂ, ತಂಡದ ನಿರ್ವಹಣೆ ಅಭಿಷೇಕ್ ಮೇಲಿನ ನಂಬಿಕೆಯನ್ನು ಕಳೆದುಕೊಂಡಿಲ್ಲ. ಆದರೆ ಮುಂದಿನ ಹಂತದಲ್ಲಿ ಸ್ಪರ್ಧೆ ತೀವ್ರವಾಗಿರುವುದರಿಂದ ಅವರಿಂದ ಪರಿಣಾಮಕಾರಿ ಇನ್ನಿಂಗ್ಸ್ ಅಗತ್ಯವಾಗಿದೆ.



