February 22, 2026
Sunday, February 22, 2026
spot_img

ರಸ್ತೆ ಬದಿ ನಿಂತಿದ್ದವರಿಗೆ ಅಪರಿಚಿತ ವಾಹನ ಡಿಕ್ಕಿ: ಇಬ್ಬರ ದುರ್ಮರಣ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಪಟ್ರೆಹಳ್ಳಿ ಗ್ರಾಮದ ಸಮೀಪ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಡೆದ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ತಕ್ಷಣವೇ ಹಿರಿಯೂರು ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಾಹಿತಿಯ ಪ್ರಕಾರ, ಇನ್ನೋವಾ ಕಾರು ತಾಂತ್ರಿಕ ದೋಷದಿಂದ ರಸ್ತೆಯ ಬದಿ ನಿಂತಿತ್ತು. ವಾಹನ ದುರಸ್ತಿ ಮಾಡಲು ನಾಲ್ವರು ವ್ಯಕ್ತಿಗಳು ರಸ್ತೆಬದಿಯಲ್ಲಿ ನಿಂತಿದ್ದ ವೇಳೆ ವೇಗವಾಗಿ ಬಂದ ಅಪರಿಚಿತ ವಾಹನ ಏಕಾಏಕಿ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಇಬ್ಬರು ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ.

ಇದನ್ನೂ ಓದಿ:

ಡಿಕ್ಕಿ ಹೊಡೆದ ವಾಹನದ ಚಾಲಕ ಘಟನೆ ಬಳಿಕ ಸ್ಥಳದಿಂದ ಪರಾರಿಯಾಗಿರುವುದಾಗಿ ತಿಳಿದುಬಂದಿದೆ. ಅಪಘಾತದಲ್ಲಿ ಮೃತಪಟ್ಟವರ ಗುರುತು ಇನ್ನೂ ಪತ್ತೆಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆ ಕುರಿತು ಹಿರಿಯೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪರಾರಿಯಾದ ವಾಹನ ಹಾಗೂ ಚಾಲಕನ ಪತ್ತೆಗೆ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !