February 22, 2026
Sunday, February 22, 2026
spot_img

ನಾಗಮಂಗಲದ ಮಾಜಿ ಶಾಸಕ ಕೆ. ಸುರೇಶ್ ಗೌಡ ಕಾರು ಅಪಘಾತ: ಗಂಭೀರ ಗಾಯ

ಹೊಸದಿಗಂತ ಡಿಜಿಟಲ್ ಡೆಸ್ಕ್:

ನಾಗಮಂಗಲ ಕ್ಷೇತ್ರದ ಮಾಜಿ ಶಾಸಕ ಕೆ. ಸುರೇಶ್ ಗೌಡ ಅವರು ಪ್ರಯಾಣಿಸುತ್ತಿದ್ದ ಕಾರು ತಡರಾತ್ರಿ ಅಪಘಾತಕ್ಕೀಡಾಗಿದೆ. ಘಟನೆಯಲ್ಲಿ ಅವರು ಗಂಭೀರವಾಗಿ ಗಾಯಗೊಂಡಿದ್ದರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಮಂಡ್ಯ ಜಿಲ್ಲೆಯ ಬಸರಾಳು ಗ್ರಾಮದ ಸಮೀಪ ರಾತ್ರಿ ಸುಮಾರು 12 ಗಂಟೆ ವೇಳೆಗೆ ಈ ಘಟನೆ ಸಂಭವಿಸಿದೆ. ಮದ್ದೂರಿನ ಹೊಸಗಾವಿ ಗ್ರಾಮದಿಂದ ನಾಗಮಂಗಲದತ್ತ ವಾಪಸ್ಸಾಗುತ್ತಿದ್ದ ವೇಳೆ ಕಾರು ನಿಯಂತ್ರಣ ತಪ್ಪಿ ರಸ್ತೆಯಿಂದ ಹೊರಗೆ ಹೋಗಿ ಪಲ್ಟಿಯಾಗಿದೆ. ಅಪಘಾತದ ಪರಿಣಾಮ ವಾಹನ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಮಾಜಿ ಶಾಸಕರೊಂದಿಗೆ ಇದ್ದ ಚಾಲಕನಿಗೂ ತೀವ್ರ ಗಾಯಗಳಾಗಿವೆ.

ಇದನ್ನೂ ಓದಿ:

ಸ್ಥಳೀಯರು ತಕ್ಷಣ ಇಬ್ಬರನ್ನೂ ರಕ್ಷಿಸಿ ಮೊದಲು ಮಂಡ್ಯದ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದರು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ತಲೆ, ಮುಖ ಮತ್ತು ಕೈ-ಕಾಲು ಭಾಗಗಳಲ್ಲಿ ಗಾಯಗಳಾಗಿರುವುದಾಗಿ ತಿಳಿದುಬಂದಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !