February 22, 2026
Sunday, February 22, 2026
spot_img

ರಾಜ್ಯದಲ್ಲಿ ಕಳ್ಳರ ಅಟ್ಟಹಾಸ: ಆಭರಣದ ಅಂಗಡಿ, ಮನೆ, ದೇಗುಲಗಳಲ್ಲಿ ಸರಣಿ ಕಳ್ಳತನ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯದಲ್ಲಿ ವಿವಿಧ ಕಡೆಗಳಲ್ಲಿ ಕಳ್ಳತನ ಪ್ರಕರಣಗಳು ಹೆಚ್ಚುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ನೆಲಮಂಗಲದಿಂದ ಹಾಸನ ಹಾಗೂ ಮೈಸೂರುವರೆಗೆ ಒಂದೇ ದಿನದಲ್ಲಿ ಮೂರು ಪ್ರತ್ಯೇಕ ಘಟನೆಗಳು ಬೆಳಕಿಗೆ ಬಂದಿವೆ.

ನಾಗಸಂದ್ರದ ಪೂರನ್ ಜ್ಯುವೆಲರ್ಸ್‌ನಲ್ಲಿ ಗಮನ ಬೇರೆಡೆ ಸೆಳೆದು ಕಳ್ಳತನ ನಡೆದಿದೆ. ಉಂಗುರ ತೂಕ ತೋರಿಸುವಂತೆ ಕೇಳಿದ ವ್ಯಕ್ತಿ, ಅಸಲಿ 18 ಗ್ರಾಂ ಚಿನ್ನಾಭರಣವನ್ನು ನಕಲಿ ಉಂಗುರದಿಂದ ಬದಲಿಸಿ ಸುಮಾರು 3 ಲಕ್ಷ ರೂ. ಮೌಲ್ಯದ ಆಭರಣ ಕಳವು ಮಾಡಿ ಪರಾರಿಯಾಗಿದ್ದಾನೆ. ಘಟನೆ ಸಿಸಿಟಿವಿಯಲ್ಲಿ ದಾಖಲಾಗಿದ್ದು, ಬೆಂಗಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಆರಂಭಿಸಲಾಗಿದೆ.

ಇದನ್ನೂ ಓದಿ:

ಇನ್ನೊಂದೆಡೆ, ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಗಾಂಧಿ ಸರ್ಕಲ್‌ನಲ್ಲಿ ಮನೆ ಕಳ್ಳತನ ಯತ್ನ ವಿಫಲವಾಗಿದೆ. ಮನೆಯ ಹಿಂಬಾಗಿಲು ಮುರಿದು ಒಳನುಗ್ಗಲು ಬಂದಿದ್ದ ಐವರ ಪೈಕಿ ಒಬ್ಬನನ್ನು ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಕಾರಿನಲ್ಲಿ ಬಂದಿದ್ದ ಆರೋಪಿಗಳು ಉಪಕರಣಗಳೊಂದಿಗೆ ಬಂದಿದ್ದರು ಎನ್ನಲಾಗಿದೆ.

ಮೈಸೂರಿನ ಸಿದ್ದಲಿಂಗಪುರ ಗ್ರಾಮದಲ್ಲಿರುವ ಷಷ್ಠಿ ಸುಬ್ರಮಣ್ಯ ಸ್ವಾಮಿ ದೇಗುಲದಲ್ಲೂ ಹುಂಡಿ ಒಡೆದು ಹಣ ದೋಚಲಾಗಿದೆ. ಪೊಲೀಸರು ಸಿಸಿಟಿವಿ ದೃಶ್ಯಗಳ ಆಧಾರದಲ್ಲಿ ಕಳ್ಳರ ಪತ್ತೆಗೆ ಕ್ರಮ ಕೈಗೊಂಡಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !