February 22, 2026
Sunday, February 22, 2026
spot_img

Shocking | ಪರ್ಪ್ಯೂಮ್ ಗೋಡೌನ್‍ನಲ್ಲಿ ಭೀಕರ ಅಗ್ನಿ ಅವಘಡ: ಮೂವರು ಸಜೀವ ದಹನ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೆಂಗಳೂರಿನ ಉತ್ತರ ಜಿಲ್ಲೆಯ ನೆಲಮಂಗಲ ಬಳಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಪರ್ಪ್ಯೂಮ್ ಗೋದಾಮಿಗೆ ಬೆಂಕಿ ಬಿದ್ದು, ಮೂವರು ಸಜೀವ ದಹನವಾಗಿದ್ದು, 5 ಮಂದಿ ಗಾಯಗೊಂಡ ಘಟನೆ ನಡೆದಿದೆ.

ಅಗ್ನಿ ಅವಘಡಕ್ಕೆ ಮುಗಿಲೆತ್ತರಕ್ಕೆ ಬೆಂಕಿಯ ಜ್ವಾಲೆ ವ್ಯಾಪಿಸಿದೆ. ವಿಷಯ ತಿಳಿದು ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ.

ಮನೆಯೊಂದರಲ್ಲಿ ಫರ್ಪೂಮ್ ಕೆಮಿಕಲ್ ಫಿಲ್ಲಿಂಗ್ ಮಾಡುತ್ತಿದ್ದ ಸಂದರ್ಭ ಸ್ಫೋಟಗೊಂಡು ಅವಘಡಸಂಭವಿಸಿದೆ. ಘಟನೆ ನಡೆಯುವ ವೇಳೆ ಒಟ್ಟು 8 ಜನ ಸಿಬ್ಬಂದಿ ಕೆಲಸ ಮಾಡುತ್ತಿದ್ದರು. ಫಿಲ್ಲಿಂಗ್ ವೇಳೆ ಸ್ಫೋಟಗೊಂಡಿದ್ದು, ಇಡೀ ಮನೆಯನ್ನು ಆವರಿಸಿದೆ. ಘಟನೆಯಲ್ಲಿ ಮೂವರು ಸಜೀವ ದಹನ ಆಗಿದ್ದು, ಉಳಿದ ಐವರು ಗೋಡೌನ್‌ನಿಂದ ಹೊರಗಡೆ ಓಡಿಬಂದಿದ್ದಾರೆ. ಗಾಯಾಳುಗಳ ಸ್ಥಿತಿ ಗಂಭೀರವಾಗಿದ್ದು, ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ.

ಅಕ್ಕಪಕ್ಕದ ಮನೆಯವರನ್ನು ಸುರಕ್ಷಿತ ಸ್ಥಳಕ್ಕೆ ರವಾನಿಸಲಾಗಿದೆ. ಸುಗಂಧ ದ್ರವ್ಯ ತಯಾರಿಸುವ ಕೆಮಿಕಲ್‌ನಿಂದ ಸ್ಫೋಟಗೊಂಡು ಘಟನೆ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !