September 25, 2026
Friday, September 25, 2026
spot_img

ಟಿ20 ವಿಶ್ವಕಪ್ | ಸೂಪರ್ 8 ನಲ್ಲಿ ಆಫ್ರಿಕಾ-ಭಾರತ ಮುಖಾಮುಖಿ: ಟಾಸ್ ಗೆದ್ದ ಮಾರ್ಕ್ರಾಮ್ ಬ್ಯಾಟಿಂಗ್ ಆಯ್ಕೆ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಟಿ20 ವಿಶ್ವಕಪ್‌ ಸೂಪರ್ 8 ಪಂದ್ಯದಲ್ಲಿ ಇಂದು ಭಾರತ ಮತ್ತು ದಕ್ಷಿಣ ಆಫ್ರಿಕಾ ಮುಖಾಮುಖಿಯಾಗಿದ್ದು, ಟಾಸ್ ಗೆದ್ದ ದಕ್ಷಿಣ ಆಫ್ರಿಕಾ ತಂಡದ ನಾಯಕ ಐಡೆನ್ ಮಾರ್ಕ್ರಾಮ್ ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದ್ದಾರೆ.

ಭಾರತ ತನ್ನ ಆಡುವ ಹನ್ನೊಂದರಲ್ಲಿ ಒಂದು ಬದಲಾವಣೆ ಮಾಡಿಕೊಂಡಿದೆ. ಉಪನಾಯಕ ಅಕ್ಸರ್ ಪಟೇಲ್ ಹೊರಗುಳಿದಿದ್ದಾರೆ. ಅವರ ಸ್ಥಾನದಲ್ಲಿ ಸ್ಟಾರ್ ಆಲ್​ರೌಂಡರ್ ವಾಷಿಂಗ್ಟನ್ ಸುಂದರ್ ತಂಡಕ್ಕೆ ಮರಳಿದಿದ್ದಾರೆ.

ಮಾರ್ಕ್ರಾಮ್ ಆಡುವ ಹನ್ನೊಂದರ ಬಳಗದಲ್ಲಿ ನಾಲ್ಕು ಬದಲಾವಣೆಗಳನ್ನು ಮಾಡಿದ್ದಾರೆ. ಕೇಶವ್ ಮಹಾರಾಜ್, ಲುಂಗಿ ಎನ್‌ಗಿಡಿ ಮತ್ತು ಮಾರ್ಕೊ ಜಾನ್ಸೆನ್ ಕಣಕ್ಕೀಳಿಯುತ್ತಿದ್ದಾರೆ.

ಉಭಯ ತಂಡಗಳ ಪ್ಲೇಯಿಂಗ್-11
ಭಾರತ: ಸೂರ್ಯಕುಮಾರ್ ಯಾದವ್ (ನಾಯಕ), ಅಭಿಷೇಕ್ ಶರ್ಮಾ, ಇಶಾನ್ ಕಿಶನ್ (ವಿಕೆಟ್‌ಕೀಪರ್), ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ರಿಂಕು ಸಿಂಗ್, ವರುಣ್ ಚಕ್ರವರ್ತಿ, ಜಸ್ಪ್ರೀತ್ ಬುಮ್ರಾ, ವಾಷಿಂಗ್ಟನ್ ಸುಂದರ್, ಕುಲದೀಪ್ ಯಾದವ್.

ದಕ್ಷಿಣ ಆಫ್ರಿಕಾ: ಐಡೆನ್ ಮಾರ್ಕ್ರಾಮ್ (ನಾಯಕ), ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ರಯಾನ್ ರಿಕಲ್ಟನ್, ಡೆವಾಲ್ಡ್ ಬ್ರೂವಿಸ್, ಟ್ರಿಸ್ಟಾನ್ ಸ್ಟಬ್ಸ್, ಡೇವಿಡ್ ಮಿಲ್ಲರ್, ಕಾರ್ಬಿನ್ ಬಾಷ್, ಲುಂಗಿ ಎನ್‌ಗಿಡಿ, ಮಾರ್ಕೊ ಜಾನ್ಸೆನ್, ಕೇಶವ್ ಮಹಾರಾಜ್, ಕಗಿಸೊ ರಬಾಡ.

Must Read