September 28, 2026
Monday, September 28, 2026
spot_img

ನಿವೃತ್ತಿಗೂ ಮುನ್ನವೇ ನೇಮಕಾತಿ: ಶಾಲಾ ವ್ಯವಸ್ಥೆ ಸುಧಾರಣೆಗೆ ಬೊಮ್ಮಾಯಿ ಮಾಸ್ಟರ್ ಪ್ಲಾನ್!

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಹುದ್ದೆಗಳು ಖಾಲಿ ಉಳಿಯದಂತೆ ತಡೆಯಲು ತಮಿಳುನಾಡು ಮಾದರಿಯ ನೇಮಕಾತಿ ವ್ಯವಸ್ಥೆ ಜಾರಿಗೆ ತರುವುದು ಅಗತ್ಯ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಅಭಿಪ್ರಾಯಪಟ್ಟಿದ್ದಾರೆ.

ಹಾವೇರಿ ತಾಲೂಕಿನ ಕಾಟೇನಹಳ್ಳಿ ಗ್ರಾಮದ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕ ಸ್ನೇಹ ಸಮ್ಮೇಳನ ಹಾಗೂ ವಿಜ್ಞಾನ ವಸ್ತು ಪ್ರದರ್ಶನವನ್ನು ಉದ್ಘಾಟಿಸಿ ಅವರು ಮಾತನಾಡಿದರು.

“ಒಬ್ಬ ಶಿಕ್ಷಕರು ನಿವೃತ್ತರಾಗುವ ಒಂದು ವರ್ಷದ ಮುಂಚೆಯೇ ಆ ಸ್ಥಾನಕ್ಕೆ ಇನ್ನೊಬ್ಬ ಶಿಕ್ಷಕರನ್ನು ನೇಮಕ ಮಾಡುವ ಪದ್ಧತಿ ತಮಿಳುನಾಡಿನಲ್ಲಿದೆ. ಇದೇ ಮಾದರಿಯನ್ನು ನಮ್ಮ ರಾಜ್ಯದಲ್ಲೂ ಅಳವಡಿಸಿಕೊಂಡರೆ ಶಿಕ್ಷಕರ ಕೊರತೆಯನ್ನು ನೀಗಿಸಬಹುದು,” ಎಂದು ಅವರು ಹೇಳಿದರು.

ಈ ಸಂದರ್ಭದಲ್ಲಿ ಶಾಲೆಯ 7ನೇ ತರಗತಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭ ಹಾಗೂ ಸರಸ್ವತಿ ಪೂಜೆ ನೆರವೇರಿಸಲಾಯಿತು. ಗ್ರಾಮಸ್ಥರು, ಶಿಕ್ಷಕರು ಹಾಗೂ ಪಾಲಕರು ಈ ಸಂಭ್ರಮದ ಕಾರ್ಯಕ್ರಮಕ್ಕೆ ಸಾಕ್ಷಿಯಾದರು.

Must Read