ಹೊಸದಿಗಂತ ಡಿಜಿಟಲ್ ಡೆಸ್ಕ್:
ಟಿ20 ವಿಶ್ವಕಪ್ 2026ರ ಸೂಪರ್-8 ಹಂತದ ಮೊದಲ ಪಂದ್ಯದಲ್ಲೇ ಭಾರತ ತಂಡಕ್ಕೆ ಹಿನ್ನಡೆಯಾಗಿದೆ. ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಟೀಮ್ ಇಂಡಿಯಾ 76 ರನ್‌ಗಳಿಂದ ಸೋಲನುಭವಿಸಿತು.
ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ದಕ್ಷಿಣ ಆಫ್ರಿಕಾ 20 ಓವರ್‌ಗಳಲ್ಲಿ 7 ವಿಕೆಟ್ ಕಳೆದುಕೊಂಡು 187 ರನ್ ಗಳಿಸಿತು. ಆರಂಭದಲ್ಲಿ ಭಾರತೀಯ ಬೌಲರ್‌ಗಳು ಮೇಲುಗೈ ಸಾಧಿಸಿದ್ದರು. ಕೇವಲ 21 ರನ್‌ಗೆ 3 ವಿಕೆಟ್ ಕಬಳಿಸಿ ಎದುರಾಳಿಗೆ ಆಘಾತ ನೀಡಿದರು. ಆದರೆ ಮಧ್ಯ ಓವರ್‌ಗಳಲ್ಲಿ ದಕ್ಷಿಣ ಆಫ್ರಿಕಾ ಬ್ಯಾಟರ್‌ಗಳು ಗಟ್ಟಿಯಾದ ಜೊತೆಯಾಟ ನಡೆಸಿ ತಂಡವನ್ನು ಸ್ಪರ್ಧಾತ್ಮಕ ಮೊತ್ತಕ್ಕೆ ಕೊಂಡೊಯ್ದರು.
ಇದನ್ನೂ ಓದಿ:
ಜಸ್‌ಪ್ರೀತ್ ಬುಮ್ರಾ ಮತ್ತು ಅರ್ಷದೀಪ್ ಸಿಂಗ್ ಪರಿಣಾಮಕಾರಿ ದಾಳಿ ನಡೆಸಿ ಒಟ್ಟು 8 ಓವರ್‌ಗಳಲ್ಲಿ 5 ವಿಕೆಟ್ ಪಡೆದು ನಿಯಂತ್ರಣ ಸಾಧಿಸಿದರು.
187 ರನ್ ಗುರಿ ಬೆನ್ನತ್ತಿದ ಭಾರತ 18.5 ಓವರ್‌ಗಳಲ್ಲಿ 111 ರನ್‌ಗೆ ಆಲೌಟ್ ಆಯಿತು. ಪವರ್‌ಪ್ಲೇ ಅವಧಿಯಲ್ಲೇ ಪ್ರಮುಖ ವಿಕೆಟ್‌ಗಳನ್ನು ಕಳೆದುಕೊಂಡುದು ಸೋಲಿಗೆ ಕಾರಣವಾಯಿತು ಎಂದು ನಾಯಕ ಸೂರ್ಯಕುಮಾರ್ ಯಾದವ್ ಅಭಿಪ್ರಾಯಪಟ್ಟರು. ಆರಂಭಿಕ ಹಂತದಲ್ಲಿ ಸ್ಥಿರತೆ ಕಾಪಾಡದಿದ್ದರೆ ದೊಡ್ಡ ಗುರಿ ಬೆನ್ನಟ್ಟುವುದು ಕಷ್ಟವೆಂದರು. ಇನ್ನೂ ಮುಂದಿನ ಪಂದ್ಯದಲ್ಲಿ ಉತ್ತಮ ಪ್ರದರ್ಶನ ನೀಡಿ ಕಂಬ್ಯಾಕ್ ಮಾಡುವ ವಿಶ್ವಾಸವನ್ನು ತಂಡ ವ್ಯಕ್ತಪಡಿಸಿದೆ.



