April 30, 2026
Thursday, April 30, 2026
spot_img

ಅಮೆರಿಕದಲ್ಲಿ ಕುಳಿತು ಮುಧೋಳದ ಮನೆ ಕಳ್ಳತನ ತಪ್ಪಿಸಿದ ಟೆಕ್ಕಿ ಪುತ್ರಿ! ಸಿಸಿಟಿವಿ ಕಮಾಲ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಟೆಕ್ಕಿ ಯುವತಿಯೊಬ್ಬರು ಅಮೆರಿಕದಲ್ಲಿ ಕುಳಿತೇ ತನ್ನ ಮನೆಯಲ್ಲಿ ನಡೆಯಬಹುದಾದ ಕಳ್ಳತನವನ್ನು ತಪ್ಪಿಸಿ ಶೌರ್ಯ ಮೆರೆದಿದ್ದಾರೆ.

ಮುಧೋಳ ನಗರದ ಸಿದ್ರಾಮೇಶ್ವರ ಕಾಲೋನಿಯಲ್ಲಿ ನೆಲೆಸಿರುವ ನಿವೃತ್ತ ಎಂಜಿನಿಯರ್‌ ಹನಮಂತಗೌಡ ಅವರ ಪುತ್ರಿ ಶೃತಿ ಅಮೆರಿಕದಲ್ಲಿ ಉದ್ಯೋಗದಲ್ಲಿದ್ದಾರೆ. ವಿದೇಶದಲ್ಲಿದ್ದರೂ ಸಮಯಪ್ರಜ್ಞೆ ಮೆರೆಯುವ ಮೂಲಕ ಮನೆಗೆ ನುಗ್ಗಿದ್ದ ಕಳ್ಳರನ್ನು ಓಡಿಸುವಲ್ಲಿ ಶೃತಿ ಯಶಸ್ವಿಯಾಗಿದ್ದಾರೆ. 

ಕೆಲ ವರ್ಷಗಳ ಹಿಂದೆ ಸ್ವದೇಶ ಆಗಮಿಸಿದ್ದಾಗ ಶೃತಿ ಮನೆಗೆ ಸಿಸಿ ಕ್ಯಾಮೆರಾ ಅಳವಡಿಸಿದ್ದರು. ಅಳವಡಿಸಿದ್ದು ಮಾತ್ರವಲ್ಲ ಅದರ ದೃಶ್ಯ ತನ್ನ ಮೊಬೈಲಿಗೆ ಬರುವಂತೆ ಸಿಂಕ್‌ ಮಾಡಿದ್ದರು.

ಮಂಗಳವಾರ ತಡರಾತ್ರಿ 1 ರಿಂದ 2 ಗಂಟೆಯ ಮಧ್ಯೆ ಚಡ್ಡಿ ಗ್ಯಾಂಗ್ ಇಬ್ಬರು ಹನಮಂತಗೌಡ ಸಂಕಪ್ಪನವರ್ ಮನೆಗೆ ನುಗ್ಗಿದ್ದಾರೆ. ಮುಧೋಳದಲ್ಲಿ ಮಧ್ಯರಾತ್ರಿ ಆಗಿದ್ದರೆ ಅಮೆರಿಕದಲ್ಲಿ ಮಧಾಹ್ನದ 3:30ರ ಸಮಯವದು. ಹೀಗೆ ಮೊಬೈಲ್‌ ನೋಡುತ್ತಿದ್ದಾಗ ಮನೆಗೆ ಕಳ್ಳರು ನುಗ್ಗಿದ ದೃಶ್ಯವನ್ನು ನೋಡಿ ಕೂಡಲೇ ಶೃತಿ ಪೋಷಕರಿಗೆ ಕರೆ ಮಾಡಿದ್ದಾರೆ.

ತಕ್ಷಣ ಎಚ್ಚೆತ್ತ ಪೋಷಕರು ಬಾಗಿಲು ತೆರೆಯದೇ ಮನೆಯ ಎಲ್ಲಾ ದೀಪ ಆನ್‌ ಮಾಡಿ ಕೂಗಾಡಿದ್ದಾರೆ. ದಿಢೀರ್‌ ಮನೆಯ ಲೈಟ್‌ ಆನ್‌ ಆಗಿದ್ದನ್ನು ಕಂಡು ಕಳ್ಳರು ಶಾಕ್‌ಗೆ ಒಳಗಾಗಿ ಸ್ಥಳದಿಂದ ಪರಾರಿಯಾಗಿದ್ದಾರೆ.  

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !