June 27, 2026
Saturday, June 27, 2026
spot_img

ದೆಹಲಿಯ ಎರಡು ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ: ಚುರುಕುಗೊಂಡ ತನಿಖೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಷ್ಟ್ರ ರಾಜಧಾನಿ ದೆಹಲಿಯ ಎರಡು ಪ್ರಮುಖ ಶಾಲೆಗಳಿಗೆ ಮತ್ತೊಮ್ಮೆ ಬಾಂಬ್ ಬೆದರಿಕೆ ಬಂದಿದ್ದು ಆತಂಕದ ವಾತಾವರಣ ನಿರ್ಮಾಣವಾಗಿದೆ.

ಧೌಲಾ ಕುವಾನ್ ಪ್ರದೇಶದಲ್ಲಿರುವ ಆರ್ಮಿ ಪಬ್ಲಿಕ್ ಸ್ಕೂಲ್ ಹಾಗೂ ಲೋಧಿ ರಸ್ತೆದಲ್ಲಿರುವ ಏರ್ ಫೋರ್ಸ್ ಬಾಲ್ ಭಾರತಿ ಶಾಲೆಗೆ ಇ-ಮೇಲ್ ಮೂಲಕ ಸ್ಫೋಟದ ಬೆದರಿಕೆ ಕಳುಹಿಸಲಾಗಿದೆ.

ಬೆದರಿಕೆ ಸಂದೇಶ ಬಂದ ತಕ್ಷಣ ಶಾಲಾ ಆಡಳಿತ ಮಂಡಳಿ ಪೊಲೀಸರಿಗೆ ಮಾಹಿತಿ ನೀಡಿದೆ. ಮುಂಜಾಗ್ರತಾ ಕ್ರಮವಾಗಿ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಯನ್ನು ತಕ್ಷಣವೇ ಸುರಕ್ಷಿತವಾಗಿ ಹೊರಗೆ ಕಳುಹಿಸಲಾಗಿದೆ. ಬಳಿಕ ಪೊಲೀಸ್ ಪಡೆ, ಬಾಂಬ್ ನಿಷ್ಕ್ರಿಯ ದಳ, ಶ್ವಾನ ದಳ ಹಾಗೂ ಅಗ್ನಿಶಾಮಕ ಸಿಬ್ಬಂದಿ ಶಾಲಾ ಆವರಣವನ್ನು ಸಂಪೂರ್ಣವಾಗಿ ಪರಿಶೀಲಿಸಿದರು.

ಇದನ್ನೂ ಓದಿ:

ಈ ಘಟನೆ 12ನೇ ತರಗತಿ ಪರೀಕ್ಷೆಗಳು ನಡೆಯುತ್ತಿರುವ ಸಮಯದಲ್ಲಿ ಸಂಭವಿಸಿದ್ದು, ನಾಲ್ಕು ದಿನಗಳ ಅಂತರದಲ್ಲಿ ಎರಡನೇ ಬಾರಿ ಇಂತಹ ಬೆದರಿಕೆ ಬಂದಿರುವುದು ಗಮನಾರ್ಹವಾಗಿದೆ. ಪ್ರಾಥಮಿಕ ಶೋಧ ಕಾರ್ಯದಲ್ಲಿ ಯಾವುದೇ ಸಂಶಯಾಸ್ಪದ ವಸ್ತು ಪತ್ತೆಯಾಗಿಲ್ಲವೆಂದು ಅಧಿಕಾರಿಗಳು ತಿಳಿಸಿದ್ದಾರೆ.

ಆದಾಗ್ಯೂ ಭದ್ರತಾ ದೃಷ್ಟಿಯಿಂದ ಶಾಲೆಗಳನ್ನು ತಾತ್ಕಾಲಿಕವಾಗಿ ಮುಚ್ಚುವಂತೆ ಸೂಚಿಸಲಾಗಿದೆ. ಸೈಬರ್ ಘಟಕದ ಸಹಾಯದಿಂದ ಧಮಕಿ ಸಂದೇಶ ಕಳುಹಿಸಿದವರ ಪತ್ತೆಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸ್ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !