ಹೊಸದಿಗಂತ ಡಿಜಿಟಲ್ ಡೆಸ್ಕ್:
ವಾಡಿಕೆಗಿಂತ ಈ ಬಾರಿ ಜಾಸ್ತಿ ಬಿಸಿಲಿದೆ. ಹೌದು, ಈಗಿನ್ನೂ ಬೇಸಿಗೆ ಆರಂಭವಾಗಿದೆ. ಆದರೆ ಬಿಸಿಲು ಮಾತ್ರ ನೆತ್ತಿ ಸುಡುವಂತಿದೆ. ಈಗಾಗಲೇ ತಾಪಮಾನದಲ್ಲಿ ಏರಿಕೆ ಕಾಣುತ್ತಿದೆ. ಹೀಗಾಗಿ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದ್ದು, ಈ ಬಾರಿ ಬೇಸಿಗೆಯಲ್ಲಿ ವಾಡಿಕೆಗಿಂತ ಅಧಿಕ ತಾಪಮಾನ ವರದಿಯಾಗಲಿದೆ ಎಂದು ತಿಳಿಸಿದೆ.
ಈಗಾಗಲೇ ರಾಜ್ಯದ ಕಲಬುರಗಿ, ಹಾವೇರಿ, ಬಾಗಲಕೋಟೆ, ಶಿವಮೊಗ್ಗ, ಉತ್ತರ ಕನ್ನಡದಲ್ಲಿ ವಾಡಿಕೆಗಿಂತ ಹೆಚ್ಚು ತಾಪಮಾನ ವರದಿಯಾಗಿದ್ದು, 2 ರಿಂದ 3 ಡಿಗ್ರಿ ಸೆಲ್ಸಿಯಸ್ ತಾಪಮಾನ ಹೆಚ್ಚಳ ಕಂಡುಬಂದಿದೆ. ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಇನ್ನಷ್ಟು ಹೆಚ್ಚಾಗಲಿದ್ದು, ಉತ್ತರ ಒಳನಾಡಿನ ಕಲಬುರಗಿ, ಯಾದಗಿರಿ, ಕೊಪ್ಪಳ, ರಾಯಚೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ 42 ರಿಂದ 45 ಡಿಗ್ರಿ ಸೆಲ್ಸಿಯಸ್‌ಗೆ ಹೆಚ್ಚಲಿದೆ. ಬೆಂಗಳೂರಿನಲ್ಲಿ ಕೂಡ ತಾಪಮಾನ 39 ಡಿಗ್ರಿಗೆ ತಲುಪಲಿದೆ ಎಂದು ಮಾಹಿತಿ ನೀಡಿದೆ.
ಈ ವಾತಾವರಣಕ್ಕೆ ತಕ್ಕಂತಹ ರೀತಿ ಆರೋಗ್ಯವನ್ನು ನೋಡಿಕೊಳ್ಳಿ ಎಂದು ವೈದ್ಯರು ಸಲಹೆ ನೀಡಿದ್ದಾರೆ. ಮಧ್ಯಾಹ್ನದ ಬಿಸಿಲಿನಲ್ಲಿ ಓಡಾಟ ತಪ್ಪಿಸಿ, ದೇಹ ಹೈಡ್ರೇಟ್ ಆಗಿರುವಂತೆ ನೋಡಿಕೊಳ್ಳಬೇಡಿ. ಹಣ್ಣು ಹಂಪಲುಗಳ ಸೇವನೆ ಉತ್ತಮ ಎನ್ನಲಾಗಿದೆ.
SUMMER | ಈ ವರ್ಷ ವಾಡಿಕೆಗಿಂತ ಬಿಸಿಲು ಜಾಸ್ತಿನೇ ಇದೆ, ಆರೋಗ್ಯದ ಬಗ್ಗೆ ಗಮನ ಇರಲಿ
ಸಾಂದರ್ಭಿಕ ಚಿತ್ರ



