October 14, 2026
Wednesday, October 14, 2026
spot_img

ಮೈಸೂರಿನಲ್ಲಿ ರಾಮ್‌ ಚರಣ್‌! 1000 ಡ್ಯಾನ್ಸರ್ಸ್‌ ಜೊತೆ ಹಾಡಿನ ಶೂಟಿಂಗ್‌ ಮುಗಿಸಿದ ಟೀಂ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಗ್ಲೋಬಲ್ ಸ್ಟಾರ್ ರಾಮ್ ಚರಣ್ ತೇಜಾ ನಟಿಸುತ್ತಿರುವ ಬಹುನಿರೀಕ್ಷಿತ ಸಿನಿಮಾ ಪೆದ್ದಿ ಸಿನಿಮಾದ ಹಾಡಿನ ಶೂಟಿಂಗ್‌ ಮೈಸೂರಿನಲ್ಲಿ ನಡೆದಿದೆ.

ಈ ಸಿನಿಮಾದ ಟೀಸರ್ ಈಗಾಗಲೇ ರಿಲೀಸ್ ಆಗಿದೆ. ಟೀಸರ್‌ ಚೆನ್ನಾಗಿ ಮೂಡಿಬಂದಿರುವುದರಿಂದ ಸಿನಿಮಾ ಅಭಿಮಾನಿಗಳು ಸಿನಿಮಾ ರಿಲೀಸ್‌ಗಾಗಿ ಕಾದು ಕುಳಿತಿದ್ದಾರೆ. ಸದ್ಯ, ಚಿತ್ರತಂಡ ಮೈಸೂರಿನಲ್ಲಿ ಗೌರಿ-ಗಣೇಶ ಹಬ್ಬದ ನಡುವೆಯೂ ಶೂಟಿಂಗ್ ನಲ್ಲಿ ತೊಡಗಿಸಿಕೊಂಡಿತ್ತು.

ಮೈಸೂರಿನಲ್ಲಿ ರಾಮ್ ಚರಣ್ ನಾಯಕನಾಗಿ ಅಭಿನಯಿಸುತ್ತಿರುವ ಪೆದ್ದಿ ಚಿತ್ರೀಕರಣ ಭರದಿಂದ ಸಾಗುತ್ತಿದೆ. ಅದ್ಧೂರಿ ಸೆಟ್ ಹಾಕಿ ಮಾಸ್ ಸಾಂಗ್ ವೊಂದನ್ನು ಶೂಟಿಂಗ್ ನಡೆಸಲಾಗಿದೆ. 1000 ಡ್ಯಾನ್ಸರ್ಸ್ ಜೊತೆ ಗ್ಲೋಬಲ್ ಸ್ಟಾರ್ ರಾಮ್ ಚರಣ್ ಹಾಡಿಗೆ ಹೆಜ್ಜೆ ಹಾಕ್ತಿದ್ದು, ಖ್ಯಾತ ಡ್ಯಾನ್ಸ್ ಮಾಸ್ಟರ್ ಜಾನಿ ಈ ಹಾಡಿಗೆ ಕೊರಿಯಾಗ್ರಾಫ್ ಮಾಡುತ್ತಿದ್ದಾರೆ. ಬಹಳ ಅದ್ಧೂರಿಯಾಗಿ ದೊಡ್ಡ ಬಜೆಟ್ ನಲ್ಲಿ ಈ ಸಾಂಗ್ ಚಿತ್ರೀಕರಣ ನಡೆದಿದೆ.

ಉಪ್ಪೇನ ನಿರ್ದೇಶಕ ಬುಚ್ಚಿಬಾಬು ಸನಾ ನಿರ್ದೇಶನ ಪೆದ್ದಿ ಸ್ಫೋರ್ಟ್ ಆಕ್ಷನ್ ಡ್ರಾಮಾ ಕಥಾಹಂದರವೊಂದಿದೆ. ರಾಮ್ ಚರಣ್‌ಗೆ ಜಾನ್ವಿ ಕಪೂರ್ ನಾಯಕಿಯಾಗಿ ನಟಿಸಿದ್ದಾರೆ. ಕನ್ನಡದ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್, ಜಗಪತಿ ಬಾಬು ಮತ್ತು ದಿವೇಂದು ಶರ್ಮಾ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.

Must Read