April 20, 2026
Monday, April 20, 2026
spot_img

ನಟ ದರ್ಶನ್ ಗೆ ರಿಲೀಫ್: ಗನ್ ಲೈಸೆನ್ಸ್ ಅಮಾನತು ಆದೇಶಕ್ಕೆ ಹೈಕೋರ್ಟ್‌ ತಡೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಸ್ಯಾಂಡಲ್‌ವುಡ್ ನಟ ದರ್ಶನ್ ಗೆ ಹೈಕೋರ್ಟ್‌ನಲ್ಲಿ ಸಣ್ಣ ರಿಲೀಫ್ ಸಿಕ್ಕಿದ್ದು, ಗನ್ ಲೈಸೆನ್ಸ್ ಪರವಾನಗಿ ಅಮಾನತುಗೊಳಿಸಿ ಪೊಲೀಸರು ಹೊರಡಿಸಿದ್ದ ಆದೇಶಕ್ಕೆ ನ್ಯಾಯಾಲಯ ತಡೆಯಾಜ್ಞೆ ನೀಡಿದೆ.

ಪೊಲೀಸರು ದರ್ಶನ್ ಗನ್ ಲೈಸೆನ್ಸ್ ಅನ್ನು ಅಮಾನತುಗೊಳಿಸಿದ್ದರು. ಇದನ್ನು ಪ್ರಶ್ನಿಸಿ ನಟ ದರ್ಶನ್ ಹೈಕೋರ್ಟ್ ಮೆಟ್ಟಿಲೇರಿದ್ದರು.

ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾ.ಎಂ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ ಮಧ್ಯಂತರ ತಡೆ ನೀಡಿದೆ. ಮಾರ್ಚ್ 6ರವರೆಗೆ ಮಧ್ಯಂತರ ತಡೆ ಅನ್ವಯ ಆಗಲಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !