April 16, 2026
Thursday, April 16, 2026
spot_img

ಉಡುಪಿ ಕಲ್ಸಂಕ ಸರ್ಕಲ್ ಬಳಿ ಶಾಕಿಂಗ್ ಘಟನೆ: ಮೈಗೆ ಬೆಂಕಿ ಹಚ್ಚಿಕೊಂಡು ಯುವಕ ಆತ್ಮಹತ್ಯೆಗೆ ಯತ್ನ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಉಡುಪಿಯ ಜನನಿಬಿಡ ಪ್ರದೇಶವಾದ ಕಲ್ಸಂಕ ವೃತ್ತದ ಬಳಿ ಯುವಕನೋರ್ವ ಮೈಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ .

ಈ ವೇಳೆ ಪೊಲೀಸರು ಮತ್ತು ಸ್ಥಳೀಯರು ಸೇರಿ ಯುವಕನನ್ನು ರಕ್ಷಿಸಿದ್ದಾರೆ.

ಆತ್ಮಹತ್ಯೆಗೆ ಯತ್ನಿಸಿದ ಯುವಕ ಗದಗ ಮೂಲದವನೆಂದು ಗುರುತಿಸಲಾಗಿದೆ.

ಕಲ್ಸಂಕ ವೃತ್ತದ ಬಳಿ ಬಾಟಲಿಯಲ್ಲಿ ಪೆಟ್ರೋಲ್ ಹಿಡಿದು ಬಂದಿದ್ದ ಅಪರಿಚಿತ ವ್ಯಕ್ತಿ, ಕಿರುಚಾಡುತ್ತಾ ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಳ್ಳುವುದಾಗಿ ಬೆದರಿಕೆ ಹಾಕಿದ್ದಾನೆ. ಈ ವೇಳೆ ಅಲ್ಲಿಯೇ ಕರ್ತವ್ಯದಲ್ಲಿದ್ದ ಸಂಚಾರ ಪೊಲೀಸರು ಆತನ ಕೈಯಲ್ಲಿದ್ದ ಬಾಟಲಿಯನ್ನು ಕಸಿದುಕೊಳ್ಳಲು ಯತ್ನಿಸಿದ್ದು, ಆದರೆ, ಆತ ಮತ್ತೆ ಪೆಟ್ರೋಲ್ ತುಂಬಿದ ಮತ್ತೊಂದು ಬಾಟಲಿಯೊಂದಿಗೆ ಹಿಂತಿರುಗಿ, ಮೈಮೇಲೆ ಸುರಿದುಕೊಂಡು ಬೆಂಕಿ ಹಚ್ಚಿಕೊಳ್ಳುವುದಾಗಿ ಕೂಗಾಡಿದ್ದಾನೆ. ಕೂಡಲೇ ಕಾರ್ಯಪ್ರವೃತ್ತರಾದ ಪೊಲೀಸ್ ಸಿಬ್ಬಂದಿ ಆತ ಬೆಂಕಿ ಹಚ್ಚಿಕೊಳ್ಳದಂತೆ ತಡೆದು, ಪರಿಸ್ಥಿತಿಯನ್ನು ಹತೋಟಿಗೆ ತಂದಿದ್ದಾರೆ.

ಇದರಿಂದಾಗಿ ವಾಹನ ಸವಾರರು ಮತ್ತು ಪಾದಚಾರಿಗಳಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

ನಂತರ ಪೊಲೀಸರು ಆ ವ್ಯಕ್ತಿಯನ್ನು ವಶಕ್ಕೆ ಪಡೆದು, ಆತನ ಸ್ವಂತ ಊರಾದ ಗದಗಕ್ಕೆ ಕಳುಹಿಸಿಕೊಡಲು ವ್ಯವಸ್ಥೆ ಮಾಡಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !