October 18, 2026
Sunday, October 18, 2026
spot_img

ರಾಜ್ಯ ಸರ್ಕಾರದ ವಿರುದ್ಧ ಸಿಡಿದೆದ್ದ ವೈದ್ಯರು: ಮಾ.11 ರಿಂದ ಒಪಿಡಿ ಸೇವೆ ಬಂದ್‌?

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯ ಸರ್ಕಾರದ ವಿರುದ್ಧ ವೈದ್ಯರು ಸಿಡಿದೆದ್ದಿದ್ದು ,ಮಾರ್ಚ್ 11 ರಿಂದ ಮುಷ್ಕರ ನಡೆಸಲು ಮುಂದಾಗಿದ್ದಾರೆ.

ಔಷಧ ಸರಬರಾಜು, ವೈದ್ಯರ ನೇಮಕ, ಬಡ್ತಿ ಸಹಿತ ನಾನಾ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖಾ ನೌಕರರ ಕೇಂದ್ರ ಸಂಘ ಮಾರ್ಚ್ 11ರಿಂದ 15ರವರೆಗೆ ಎಲ್ಲಾ ಜಿಲ್ಲಾ ಆಸ್ಪತ್ರೆ ತಾಲೂಕಾಸ್ಪತ್ರೆ, ಸಮುದಾಯ, ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕಪ್ಪು ಪಟ್ಟಿ ಧರಿಸಿ ಮುಷ್ಕರ ನಡೆಸಲು ಮುಂದಾಗಿದ್ದಾರೆ.

ಮುಷ್ಕರ ಸಮಯ ಹೊರರೋಗಿಗಳ ಚಿಕಿತ್ಸೆ ಸ್ಥಗಿತಗೊಳಿಸಿ ತುರ್ತು ಸೇವೆ ಮಾತ್ರ ನೀಡಲು ನಿರ್ಧರಿಸಲಾಗಿದೆ. ಸರ್ಕಾರ ತಮ್ಮ ನಿಲುವಿನಲ್ಲಿ ಬದಲಾವಣೆ ಕಾಣದಿದ್ದರೆ ಮಾ.16ರಿಂದ ಗೈರಾಗುವ ಮೂಲಕ ಮುಷ್ಕರ ತೀವ್ರಗೊಳಿಸುವ ಎಚ್ಚರಿಕೆ ನೀಡಿದೆ.

ಈ ಕುರಿತು ಮಾತನಾಡಿದ ಸರ್ಕಾರಿ ವೈದ್ಯಾಧಿಕಾರಿಗಳ ಸಂಘದ ರಾಜ್ಯಾಧ್ಯಕ್ಷ ಡಾ.ರವೀಂದ್ರನಾಥ್ ಮೇಟಿ, ಕಾಲಕಾಲಕ್ಕೆ ಔಷಧಗಳ ಪೂರೈಕೆಯಾಗಿಲ್ಲ. ಔಷಧಗಳು ಇಲ್ಲದಿದ್ದರೂ ಇದೆ ಅಂತ ತೋರಿಸಲಾಗುತ್ತಿದೆ. ಸರಿಯಾಗಿ ನೇಮಕ, ವರ್ಗಾವಣೆ ಆಗುತ್ತಿಲ್ಲ. ಸರ್ಕಾರವೇ ತಂದ ನಿಯಮದ ಪ್ರಕಾರ ಚೀಟಿ ಹೊರಗೆ ಬರೆಯಬಾರದು, ಆದರೆ ಬರೆಯಲೇಬೇಕಾದ ಪರಿಸ್ಥಿತಿ ಇದೆ ಎಂದು ಹೇಳಿದರು.

Must Read