ಹೊಸದಿಗಂತ ಡಿಜಿಟಲ್ ಡೆಸ್ಕ್:
ಆ್ಯಂಕರ್ ಅನುಶ್ರೀ ಅವರು ತಮ್ಮ ಬಹುಕಾಲದ ಗೆಳೆಯ ರೋಷನ್ ಜೊತೆ ಇಂದು ವಿವಾಹ ಆಗುತ್ತಿದ್ದಾರೆ. ಇನ್ನು ಕೆಲವೇ ಸಮಯದಲ್ಲಿ ಈ ಮದುವೆ ಅದ್ದೂರಿಯಾಗಿ ನೆರವೇರಲಿದೆ. ಇವರ ಮದುವೆ ನೋಡಲು ಫ್ಯಾನ್ಸ್ ಕೂಡ ಆಗಮಿಸಿದ್ದರು.
ಅನುಶ್ರೀ ಅವರ ವಿವಾಹ ಬೆಂಗಳೂರಿನ ಹೊರ ವಲಯದಲ್ಲಿ ಇರುವ ಕಗ್ಗಲಿಪುರದ ರೆಸಾರ್ಟ್ ಒಂದರಲ್ಲಿ ನಡೆಯುತ್ತಿದೆ. ಈ ವಿಚಾರ ತಿಳಿದ ಫ್ಯಾನ್ಸ್ ದೊಡ್ಡ ಸಂಖ್ಯೆಯಲ್ಲಿ ತೆರಳುತ್ತಿದ್ದಾರೆ. ಆದರೆ, ಅಭಿಮಾನಿಗಳಿಗೆ ಒಳಗೆ ಎಂಟ್ರಿ ನೀಡಲಾಗುತ್ತಿಲ್ಲ.
ಅನುಶ್ರೀ ವಿವಾಹಕ್ಕೆ ಆಮಂತ್ರಣ ಇದ್ದರೆ ಮಾತ್ರ ಪ್ರವೇಶ ನೀಡಲಾಗುತ್ತಿದೆ. ಹೀಗಾಗಿ, ಅಭಿಮಾನಿಗಳನ್ನು ಆರಂಭದಲ್ಲೇ ತಡೆದು ಕಳುಹಿಸಲಾಗುತ್ತಿದೆ. ಇದರಿಂದ ಫ್ಯಾನ್ಸ್ ಸಾಕಷ್ಟು ಬೇಸರ ಮಾಡಿಕೊಂಡಿದ್ದಾರೆ. ಅವರು ಅಸಮಾಧಾನ ಹೊರಹಾಕುತ್ತಿದ್ದಾರೆ.
‘ಅನುಶ್ರೀ ಹೆಸರು ಮಾಡೋಕೆ ಫ್ಯಾನ್ಸ್ ಕಾರಣ. ಇವತ್ತು ನಮನ್ನೆ ಮದುವೆ ಮನೆಗೆ ಬಿಟ್ಟಿಲ್ಲ’ ಎಂದು ಫ್ಯಾನ್ಸ್ ಬೇಸರ ಮಾಡಿಕೊಂಡು ಹೊರ ಹೋಗುತ್ತಿದ್ದಾರೆ.
ಅನುಶ್ರೀ ವಿವಾಹಕ್ಕೆ ಅನೇಕ ಸೆಲೆಬ್ರಿಟಿಗಳು ಹಾಜರಿ ಹಾಕುವ ನಿರೀಕ್ಷೆ ಇದೆ. ಈ ಕಾರಣಕ್ಕೆ ಅಭಿಮಾನಿಗಳನ್ನೂ ಒಳಗೆ ಬಿಟ್ಟರೆ ನೂಕು ನುಗ್ಗಲು ಆಗುವ ಸಾಧ್ಯತೆ ಇರುತ್ತದೆ. ಹೀಗಾಗಿ, ಅನುಶ್ರೀ-ರೋಷನ್ ಆಮಂತ್ರಣ ಇರುವವರಿಗೆ ಮಾತ್ರ ಒಳಗೆ ಬಿಡಲು ಸೂಚನೆ ನೀಡಿದ್ದಾರೆ.