October 15, 2026
Thursday, October 15, 2026
spot_img

ಅಕ್ರಮವಾಗಿ ಗಡಿ ನುಸುಳಲು ಯತ್ನಿಸಿದ ಇಬ್ಬರು ಉಗ್ರರ ಎನ್‌ಕೌಂಟರ್

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಜಮ್ಮು ಕಾಶ್ಮೀರದ ಬಂಡಿಪೋರಾ ಜಿಲ್ಲೆಯ ಗುರೆಜ್ ಸೆಕ್ಟರ್‌ನ ಗಡಿ ನಿಯಂತ್ರಣಾ ರೇಖೆಯಲ್ಲಿ ಅಕ್ರಮವಾಗಿ ಗಡಿ ನುಸುಳಲು ಯತ್ನಿಸಿದ ಇಬ್ಬರು ಉಗ್ರರನ್ನು ಭದ್ರತಾ ಪಡೆ ಹೊಡೆದುರುಳಿಸಿದೆ.

ಉಗ್ರರ ಒಳನುಸುಳುವಿಕೆಯ ಬಗ್ಗೆ ಗುಪ್ತಚರ ಮಾಹಿತಿ ಆಧರಿಸಿ ಸೇನಾ ಸಿಬ್ಬಂದಿ ಮತ್ತು ಕಾಶ್ಮೀರ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿದ್ದಾರೆ. ಈ ವೇಳೆ ಉಗ್ರರು ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆ. ಈ ಹಿನ್ನೆಲೆ ಭದ್ರತಾ ಪಡೆ ಕೂಡ ಪ್ರತಿದಾಳಿ ನಡೆಸಿ ಇಬ್ಬರು ಉಗ್ರರನ್ನು ಎನ್‌ಕೌಂಟರ್ ಮಾಡಿದ್ದಾರೆ ಎಂದು ಭಾರತೀಯ ಸೇನೆಯ ಚಿನಾರ್ ಕಾರ್ಪ್ಸ್ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದೆ.

ಘಟನಾ ಸ್ಥಳದಲ್ಲಿ ಶೋಧ ಕಾರ್ಯಾಚರಣೆ ಮುಂದುವರಿದಿದೆ. ಭಯೋತ್ಪಾದನಾ ನಿಗ್ರಹ ದಳದಿಂದ ಕಾರ್ಯಾಚರಣೆ ನಡೆಯುತ್ತಿದೆ. 

Must Read