April 15, 2026
Wednesday, April 15, 2026
spot_img

ಮುರುಡೇಶ್ವರದ ಬೈಲೂರಿನಲ್ಲಿ ಹಿಂದುಗಳ ಮನೆ ಮೇಲೆ ಕಲ್ಲು ತೂರಾಟ: ಅನ್ಯಕೋಮಿನ ಯುವಕರ ಬಂಧನ

ಹೊಸ ದಿಗಂತ ವರದಿ, ಕಾರವಾರ:

ಹಿಂದು ಧರ್ಮದವರ ಮನೆಗಳನ್ನು ಗುರಿಯಾಗಿಸಿ ಅನ್ಯಕೋಮಿನ ಯುವಕರು ಕಲ್ಲು ತೂರಾಟ ನಡೆಸಿದ ಘಟನೆ ಭಟ್ಕಳ ತಾಲೂಕಿನ ಮುರುಡೇಶ್ವರ ಸಮೀಪ ಬೈಲೂರಿನ ತೆಂಗಾರದಲ್ಲಿ ನಡೆದಿದೆ.

ಸೋಮವಾರ ರಾತ್ರಿ 10 ಗಂಟೆಯ ನಂತರ ಮೂರು ಬೈಕುಗಳಲ್ಲಿ ಬಂದ ಕಿಡಿಗೇಡಿಗಳು ಹಿಂದೂ ಧರ್ಮದವರ ಮನೆಗಳ ಮೇಲೆ ಕಲ್ಲು ತೂರಾಟ ನಡೆಸಿರುವುದಾಗಿ ತಿಳಿದು ಬಂದಿದೆ.

ಕಲ್ಲು ತೂರಾಟ ನಡೆಸಿದವರು ಅಪ್ರಾಪ್ತ ವಯಸ್ಸಿನ ಯುವಕರಾಗಿದ್ದು ಗುಂಪಾಗಿ ಬಂದು ಕಲ್ಲು ತೂರಾಟ ನಡೆಸಿದ್ದಾರೆ
ಸ್ಥಳೀಯ ಜನರು ಮನೆಗಳಿಂದ ಹೊರ ಬಂದು ಮೂವರನ್ನು ಹಿಡಿದು ಮುರ್ಡೇಶ್ವರ ಪೊಲೀಸರಿಗೆ ಒಪ್ಪಿಸಿದ್ದಾರೆ.

ಘಟನೆಯಿಂದ ಆಕ್ರೋಶಗೊಂಡ ಹಿಂದು ಸಮಾಜದ ಜನರು ರಾತ್ರಿ ಮುರ್ಡೇಶ್ವರ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದ್ದು ಆರು ಜನ ಅಪ್ರಾಪ್ತರನ್ನು ಪೊಲೀಸರು ವಶಕ್ಕೆ ಪಡೆದಿರುವುದಾಗಿ ತಿಳಿದು ಬಂದಿದೆ.

ತಪ್ಪಿತಸ್ಥರ ಮೇಲೆ ಕಠಿಣ ಕ್ರಮ ಕೈಗೊಳ್ಳುವಂತೆ ಹಿಂದೂಪರ ಸಂಘಟನೆಗಳು ಒತ್ತಾಯಿಸಿದ್ದು ,ಜಿಲ್ಲಾ ಪೊಲೀಸ್ ವರಿಷ್ಠ ದೀಪನ್.ಎನ್.ಎಂ ಅವರು ಸ್ಥಳಕ್ಕೆ ಭೇಟಿ ನೀಡಿ ಕಾನೂನು ಕ್ರಮ ಜರುಗಿಸುವ ಭರವಸೆ ನೀಡಿ ಕಾನೂನು ಸುವ್ಯವಸ್ಥೆ ಕಾಪಾಡುವಂತೆ ಮನವಿ ಮಾಡಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !