ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಅಮೆರಿಕದ ಈಶಾನ್ಯ ಭಾಗದಲ್ಲಿ ಭಾರೀ ಹಿಮಪಾತವಾಗಿದ್ದು, ಇದರ ಪರಿಣಾಮ 5,600 ಕ್ಕೂ ಹೆಚ್ಚು ವಿಮಾನಗಳ ಹಾರಾಟವನ್ನು ರದ್ದುಗೊಳಿಸಲಾಗಿದೆ. ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ಮೇರಿಲ್ಯಾಂಡ್‌ನಿಂದ ಮೈನೆವರೆಗೆ ಭಾರಿ ಹಿಮಬಿರುಗಾಳಿ ಅಪ್ಪಳಿಸಿದೆ. ಸಾರಿಗೆ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ. ವ್ಯಾಪಾರ-ವಹಿವಾಟಿಗೆ ಅಡ್ಡಿಯುಂಟಾಗಿದೆ. ಜನಜೀವನ ಅಸ್ತವ್ಯಸ್ತವಾಗಿದೆ.

ಮಹಾನಗರದ ಈಶಾನ್ಯದ ಕೆಲವು ಭಾಗಗಳಲ್ಲಿ 2 ಅಡಿ (60 ಸೆಂಟಿಮೀಟರ್) ಗಿಂತ ಹೆಚ್ಚು ಹಿಮವನ್ನು ಸುರಿಸಿದೆ. ಅಧಿಕಾರಿಗಳು ತುರ್ತು ಪರಿಸ್ಥಿತಿಗಳನ್ನು ಘೋಷಿಸಿದ್ದಾರೆ. ಶಾಲೆಗಳನ್ನು ಮುಚ್ಚಲಾಗಿದೆ. ಹಲವೆಡೆ ವಿದ್ಯುತ್ ವ್ಯತ್ಯಯವಾಗಿದೆ.



