February 24, 2026
Tuesday, February 24, 2026
spot_img

ಭಾಸ್ಕರ್ ರಾವ್ ಸೋದರ ಅಳಿಯ ನಾಪತ್ತೆ: ನೆರವಿಗೆ ಮಾಜಿ ಐಪಿಎಸ್ ಅಧಿಕಾರಿ ಮನವಿ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಬೆಂಗಳೂರು ಮಾಜಿ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಅವರು ಸೋದರ ಅಳಿಯ ಅನಿರುದ್ಧ್ ರಮೇಶ್ ಅವರ ನಾಪತ್ತೆಯಾಗಿದ್ದು, ಅವರ ಸುಳಿವು ಸಿಕ್ಕರೆ ಮಾಹಿತಿ ನೀಡುವಂತೆ ಸಾಮಾಜಿಕ ಜಾಲತಾಣಗಳ ಬಳಕೆದಾರರಿಂದ ಸಹಾಯ ಕೋರಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಭಾಸ್ಕರ್ ರಾವ್ ಅವರು, ಅನಿರುದ್ಧ್ ದಕ್ಷಿಣ ಬೆಂಗಳೂರಿನ ಪ್ರತಿಷ್ಠಿತ ಕಾಲೇಜಿನಲ್ಲಿ ಮನೋವಿಜ್ಞಾನ ವಿಭಾಗದ ಸಹಾಯಕ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸುತ್ತಿದ್ದು, ಹನುಮಂತನಗರದಲ್ಲಿ ವಾಸವಿದ್ದರು. ಅವರು ಸುಮಾರು 6 ಅಡಿ 2 ಇಂಚು ಎತ್ತರದವರು ಹಾಗೂ ಶಾಂತ ಸ್ವಭಾವದ ವ್ಯಕ್ತಿ ಎಂದು ಮಾಹಿತಿ ಹಂಚಿಕೊಂಡಿದ್ದಾರೆ. ಸಾಮಾಜಿಕ ಜಾಲತಾಣ ವ್ಯಾಪ್ತಿ ಬಹಳ ದೊಡ್ಡದಿದ್ದು, ಹೀಗಾಗಿ, ಸಹಾಯ ಕೋರಲಾಗಿದೆ ಎಂದು ಭಾಸ್ಕರ್ ರಾವ್ ಅವರು ತಿಳಿಸಿದ್ದಾರೆ.

https://twitter.com/Nimmabhaskar22/status/2025640193127243979?ref_src=twsrc%5Etfw%7Ctwcamp%5Etweetembed%7Ctwterm%5E2025640193127243979%7Ctwgr%5E0669ea51275162bfecadc925f7aa3797f37cf097%7Ctwcon%5Es1_&ref_url=https%3A%2F%2Fwww.kannadaprabha.com%2Fkarnataka%2F2026%2FFeb%2F24%2Fformer-bengaluru-police-commissioner-rao-seeks-social-media-help-to-trace-missing-nephew

ಇತ್ತ ಅನಿರುದ್ಧ್ ನಾಪತ್ತೆಯಾಗುವ ವೇಳೆ ಖಾತೆಯಿಂದ ರೂ.9,000 ಡ್ರಾ ಆಗಿದೆ. ಆತನ ವಾಹನ, ಕ್ರೆಡಿಟ್ ಕಾರ್ಡ್, ಮೊಬೈಲ್ ಫೋನ್ ಕೂಡ ತೆಗೆದುಕೊಂಡು ಹೋಗಿಲ್ಲ. ಯಾವುದೇ ಪತ್ರ ಕೂಡ ಬರೆದಿಲ್ಲ ಎಂದು ಹೇಳಿದ್ದಾರೆ.

ಫೆಬ್ರವರಿ 17 ರಂದು ನಾಪತ್ತೆ ದೂರು ದಾಖಲಿಸಲಾಗಿದ್ದು, ಅನಿರುದ್ಧ್ ಜಯನಗರದ ಖಾಸಗಿ ಕಾಲೇಜಿನಲ್ಲಿ ಕೆಲಸ ಮಾಡುತ್ತಿದ್ದು, ಫೆಬ್ರವರಿ 16 ರಂದು ಸಂಜೆ 4.45 ರಿಂದ 5 ಗಂಟೆಯ ನಡುವೆ ತಮ್ಮ ಕೆಲಸದ ಸ್ಥಳದಿಂದ ಹೊರಬಂದ ನಂತರ ನಾಪತ್ತೆಯಾಗಿದ್ದಾರೆ ಎಂದು ತಿಳಿಸಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !