ಹೊಸದಿಗಂತ ಡಿಜಿಟಲ್ ಡೆಸ್ಕ್:
ಬ್ರಿಸ್ಬೇನ್‌ನಲ್ಲಿ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾದ ಆರಂಭಿಕ ಆಟಗಾರ್ತಿ ಸ್ಮೃತಿ ಮಂಧಾನ ಗಮನಾರ್ಹ ಅರ್ಧಶತಕ ಬಾರಿಸಿ ವಿಶೇಷ ದಾಖಲೆಯನ್ನು ನಿರ್ಮಿಸಿದ್ದಾರೆ.
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆರಂಭಿಸಿದ ಭಾರತಕ್ಕೆ ಅವರು ದೃಢವಾದ ಶುಭಾರಂಭ ನೀಡಿದರು. ಕೇವಲ 57 ಎಸೆತಗಳಲ್ಲಿ ಅರ್ಧಶತಕ ಪೂರ್ಣಗೊಳಿಸಿದ ಮಂಧಾನ, ಆಸ್ಟ್ರೇಲಿಯಾ ವಿರುದ್ಧ ಅತ್ಯಧಿಕ ಬಾರಿ 50ಕ್ಕೂ ಹೆಚ್ಚು ರನ್ ಗಳಿಸಿದ ಏಷ್ಯನ್ ಬ್ಯಾಟರ್ ಎಂಬ ಹೆಗ್ಗಳಿಕೆಗೆ ಪಾತ್ರರಾದರು.
ಇದನ್ನೂ ಓದಿ:
ಇದುವರೆಗೆ ಆಸ್ಟ್ರೇಲಿಯಾ ವಿರುದ್ಧ 22 ಏಕದಿನ ಪಂದ್ಯಗಳಲ್ಲಿ ಮಂಧಾನ 4 ಶತಕ ಮತ್ತು 7 ಅರ್ಧಶತಕಗಳನ್ನು ದಾಖಲಿಸಿದ್ದಾರೆ. ಈ ಸಾಧನೆಯ ಮೂಲಕ ಅವರು ನಿರಂತರತೆಯ ಪ್ರದರ್ಶನ ನೀಡಿದ್ದಾರೆ. ಜೊತೆಗೆ, ಮಿಥಾಲಿ ರಾಜ್ ಬಳಿಕ ಆಸ್ಟ್ರೇಲಿಯಾ ವಿರುದ್ಧ ಏಕದಿನ ಕ್ರಿಕೆಟ್‌ನಲ್ಲಿ 1000 ರನ್‌ಗಳನ್ನು ದಾಟಿದ ಎರಡನೇ ಭಾರತೀಯ ಮಹಿಳಾ ಬ್ಯಾಟರ್ ಎಂಬ ಗೌರವವೂ ಅವರದಾಗಿದೆ. ಆಸೀಸ್ ವಿರುದ್ಧ ಅವರ ಒಟ್ಟು ರನ್ ಸಂಖ್ಯೆ 1,078ಕ್ಕೆ ಏರಿಕೆಯಾಗಿದೆ.



