ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಲ್ಕಿ 2898 ಎಡಿ ಚಿತ್ರದ ಮೊದಲ ಭಾಗ ಭರ್ಜರಿ ಯಶಸ್ಸು ಕಂಡ ಬಳಿಕ ಅದರ ಮುಂದುವರಿದ ಭಾಗದ ಕುರಿತು ಕುತೂಹಲ ಹೆಚ್ಚಿತ್ತು. ಮಧ್ಯದಲ್ಲಿ ಹಲವು ಅಡೆತಡೆಗಳು ಎದುರಾದ ಕಾರಣ ಸೀಕ್ವೆಲ್ ವಿಳಂಬವಾಗಿತ್ತು. ವಿಶೇಷವಾಗಿ ದೀಪಿಕಾ ಪಡುಕೋಣೆ ಚಿತ್ರದಿಂದ ದೂರವಾಗಿರುವ ಸುದ್ದಿ ಚರ್ಚೆಗೆ ಕಾರಣವಾಗಿತ್ತು. ಚಿತ್ರ ನಿಲ್ಲಬಹುದು ಎಂಬ ಮಾತುಗಳೂ ಕೇಳಿಬಂದಿದ್ದವು.
ಆದರೆ ಈಗ ಅಭಿಮಾನಿಗಳಿಗೆ ಖುಷಿ ಸುದ್ದಿ ಸಿಕ್ಕಿದೆ. ನಿರ್ದೇಶಕ ನಾಗ್ ಅಶ್ವಿನ್ ಅವರ ಮಾರ್ಗದರ್ಶನದಲ್ಲಿ ಸೀಕ್ವೆಲ್ ಅಧಿಕೃತವಾಗಿ ಆರಂಭವಾಗಿದೆ. ಮೊದಲ ಭಾಗ ಸಾವಿರ ಕೋಟಿ ರೂಪಾಯಿಗೂ ಹೆಚ್ಚು ವಸೂಲಿ ಮಾಡಿದ್ದು, ಕಥೆ ಅರ್ಧದಲ್ಲೇ ಮುಕ್ತಾಯಗೊಂಡಿತ್ತು.
ಇದನ್ನೂ ಓದಿ:
ಸೀಕ್ವೆಲ್‌ನಲ್ಲಿ ಪ್ರಭಾಸ್ ಜೊತೆ ಅಮಿತಾಭ್ ಬಚ್ಚನ್ ಹಾಗೂ ಕಮಲ್ ಹಾಸನ್ ಕಾಣಿಸಿಕೊಳ್ಳಲಿದ್ದಾರೆ. ದೀಪಿಕಾ ಅವರ ಪಾತ್ರಕ್ಕೆ ಸಾಯಿ ಪಲ್ಲವಿ ಆಯ್ಕೆಯಾಗಿದ್ದಾರೆ ಎನ್ನಲಾಗಿದೆ.
ಇತ್ತ ಅಮಿತಾಭ್ ಬಚ್ಚನ್ ತಮ್ಮ ಬ್ಲಾಗ್‌ನಲ್ಲಿ ಕಮಲ್ ಹಾಸನ್ ಜೊತೆಗಿನ ಫೋಟೋ ಹಂಚಿಕೊಂಡಿದ್ದು, ಶೂಟಿಂಗ್ ಹೈದರಾಬಾದ್‌ನಲ್ಲಿ ಆರಂಭವಾಗಿದೆ ಎಂದು ತಿಳಿಸಿದ್ದಾರೆ. ಇದೇ ಕಾರಣದಿಂದ ಅಭಿಮಾನಿಗಳ ನಿಯಮಿತ ಭೇಟಿ ಈ ಬಾರಿ ಸಾಧ್ಯವಾಗಲಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.



