February 24, 2026
Tuesday, February 24, 2026
spot_img

ಹಿಂದಿನ ಬಿಜೆಪಿ ಸರ್ಕಾರದ ನಿರ್ಲಕ್ಷ್ಯದಿಂದಲೇ ಸಮಸ್ಯೆ : ಉದ್ಯೋಗಾಂಕ್ಷಿಗಳ ಪ್ರತಿಭಟನೆಗೆ ಸಿಎಂ ರಿಯಾಕ್ಷನ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಸರ್ಕಾರದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಿ ಎಂದು ಆಗ್ರಹಿಸಿ ಧಾರವಾಢದಲ್ಲಿ ಬೃಹತ್‌ ಪ್ರತಿಭಟನೆ ನಡೆದಿದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಪೋಸ್ಟ್‌ ಮಾಡಿದ್ದಾರೆ.

ನಿಮ್ಮ ಪ್ರತಿಭಟನೆಯ ಹಿಂದಿನ ಉದ್ದೇಶ ಅರ್ಥವಾಗಿದೆ. ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸುತ್ತೇವೆ. ನಿಮ್ಮ ಆತಂಕ, ನಿರಾಸೆ, ಅನಿಶ್ಚಿತತೆ ನಮಗೆ ಅರ್ಥವಾಗುತ್ತದೆ. ಒಂದು ಅರ್ಜಿಯ ಹಿಂದೆ ಕನಸು ಇರುತ್ತದೆ, ಒಂದು ಕುಟುಂಬದ ಆಸೆಯಿದೆ, ಹಲವು ವರ್ಷಗಳ ಕಠಿಣ ಪರಿಶ್ರಮ ಹಾಗೂ ರಾಜ್ಯ ಸೇವೆಯ ಛಲ ಇದೆ. ನಿಮ್ಮ ಬಗ್ಗೆ ಕಾಳಜಿ ಇದೆ ಎಂದು ಟ್ವೀಟ್‌ ಮಾಡಿದ್ದಾರೆ.

ನಾವು ಅಧಿಕಾರ ಸ್ವೀಕರಿಸಿದಾಗ 2.64 ಲಕ್ಷಕ್ಕೂ ಹೆಚ್ಚು ಸರ್ಕಾರಿ ಹುದ್ದೆಗಳು ಖಾಲಿಯಾಗಿದ್ದವು. ಇದು ಕೇವಲ ಒಂದೇ ದಿನಕ್ಕೆ ಉಂಟಾದ ಸಮಸ್ಯೆಯಲ್ಲ. ಹಿಂದಿನ ಬಿಜೆಪಿ ಸರ್ಕಾರದ ದೀರ್ಘಕಾಲದ ನಿರ್ಲಕ್ಷ್ಯದಿಂದಾಗಿ, ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಯಾವುದೇ ಸಮರ್ಪಕ ಯೋಜನೆ ರೂಪಿಸದೇ ಇದ್ದದ್ದರಿಂದ ಸಮಸ್ಯೆ ಉಂಟಾಗಿದೆ. ಹೀಗಿದ್ದರೂ ಬಿಜೆಪಿ ನಾಯಕರು ವಿದ್ಯಾರ್ಥಿಗಳನ್ನು ತಪ್ಪುದಾರಿಗೆಳೆಯಲು ಪ್ರಯತ್ನಿಸುತ್ತಿರುವುದು ಅತ್ಯಂತ ವಿಷಾದನೀಯ.

ಉದ್ಯೋಗಾರ್ಥಿಗಳನ್ನು ತಮ್ಮ ಭವಿಷ್ಯದ ಸಿದ್ಧತೆಯತ್ತ ಗಮನ ಹರಿಸಲು ಪ್ರೋತ್ಸಾಹಿಸುವ ಬದಲು, ಅಶಾಂತಿ ಉಂಟುಮಾಡಲು ಯತ್ನಿಸುತ್ತಿದ್ದಾರೆ. 2019ರಿಂದ 2023ರ ನಡುವೆ ನಡೆದ ನೇಮಕಾತಿ ಅಕ್ರಮಗಳು ಮತ್ತು ಭ್ರಷ್ಟಾಚಾರ ಪ್ರಕರಣಗಳು ವ್ಯವಸ್ಥೆಯ ಮೇಲೆ ನಂಬಿಕೆಯನ್ನು ಕುಗ್ಗಿಸಿದೆ. ಖಾಲಿ ಹುದ್ದೆಗಳ ನೇಮಕ ವಿಚಾರದಲ್ಲೂ ಹಿನ್ನೆಡೆಗೆ ಕಾರಣವಾಗಿದೆ. ನಮ್ಮ ಸರ್ಕಾರ ನೇಮಕಾತಿ ಪ್ರಕ್ರಿಯೆಯಲ್ಲಿ ವಿಶ್ವಾಸಾರ್ಹತೆ, ಪಾರದರ್ಶಕತೆ ಪುನಃ ಸ್ಥಾಪಿಸಲು ಬದ್ಧವಾಗಿದೆ ಎಂದಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !