February 24, 2026
Tuesday, February 24, 2026
spot_img

ಭಾರತೀಯ ಸೇನೆಗೆ ಅವಮಾನ: ಅಜೀಂ ಪ್ರೇಮ್‌ಜಿ ವಿಶ್ವವಿದ್ಯಾಲಯದ ವಿರುದ್ಧ ಎಬಿವಿಪಿ ಪ್ರತಿಭಟನೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೆಂಗಳೂರು ಸರ್ಜಾಪುರದಲ್ಲಿರುವ ಅಜೀಂ ಪ್ರೇಮ್‌ಜಿ ವಿಶ್ವವಿದ್ಯಾಲಯದ ಎದುರು ABVP ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಸಂಜೆ ವೇಳೆ ವಿಶ್ವವಿದ್ಯಾಲಯ ಆವರಣಕ್ಕೆ ಪ್ರವೇಶಿಸಿದ ಪ್ರತಿಭಟನಾಕಾರರು ತ್ರಿವರ್ಣ ಧ್ವಜ ಹಿಡಿದು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ವಿಶ್ವವಿದ್ಯಾಲಯದ ನಾಮಫಲಕಕ್ಕೆ ಕಪ್ಪುಮಸಿ ಬಳಿದು ವಿರೋಧ ವ್ಯಕ್ತಪಡಿಸಿದ ಘಟನೆ ಉದ್ವಿಗ್ನತೆಯನ್ನುಂಟುಮಾಡಿತು.

ಇದನ್ನೂ ಓದಿ:

ಸ್ಥಳಕ್ಕೆ ಧಾವಿಸಿದ ಸರ್ಜಾಪುರ ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಿಸಿ ಕೆಲವರನ್ನು ವಶಕ್ಕೆ ಪಡೆದರು. ಇದೇ ಸಂದರ್ಭದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದಿರುವ ಎಬಿವಿಪಿ, ವಿಶ್ವವಿದ್ಯಾಲಯದ ಮಾನ್ಯತೆ ರದ್ದುಗೊಳಿಸುವಂತೆ ಆಗ್ರಹಿಸಿದೆ.

ವಿದ್ಯಾರ್ಥಿ ಸಂಘಟನೆ ಆರೋಪಿಸಿದಂತೆ, ಎಐಎಸ್ಎ ಪ್ರಾಯೋಜಿತ ಕಾರ್ಯಕ್ರಮಗಳ ಮೂಲಕ ಎಸ್‌ಪಾರ್ಕ್ ಎಂಬ ವೇದಿಕೆಯಡಿ ದೇಶವಿರೋಧಿ ಚರ್ಚೆಗಳು ನಡೆದಿವೆ ಎಂದು ಹೇಳಲಾಗಿದೆ. ಭಾರತೀಯ ಸೇನೆಯನ್ನು ಅವಮಾನಿಸುವ ರೀತಿಯ ಕಾರ್ಯಕ್ರಮಗಳು ಹಾಗೂ ಕಾಶ್ಮೀರ ವಿಚಾರದಲ್ಲಿ ಭಾರತದ ಏಕತೆಗೆ ಧಕ್ಕೆ ತರುವ ಮಾತುಕತೆಗಳು ನಡೆದಿವೆ ಎಂಬ ಆರೋಪವೂ ಮಾಡಲಾಗಿದೆ. ಜೊತೆಗೆ ನಕ್ಸಲ್ ಮತ್ತು ಮಾವೋವಾದಿ ಚಿಂತನೆಗಳನ್ನು ಉತ್ತೇಜಿಸುವ ಚಟುವಟಿಕೆಗಳಿಗೂ ವೇದಿಕೆ ನೀಡಲಾಗಿದೆ ಎಂದು ಎಬಿವಿಪಿ ದೂರಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !