October 18, 2026
Sunday, October 18, 2026
spot_img

ಅಗ್ನಿಶಾಮಕ ಇಲಾಖೆಯಲ್ಲಿ ಸಾವಿರಕ್ಕೂ ಹೆಚ್ಚು ಹುದ್ದೆ ಖಾಲಿ ಇದೆ, ಶೀಘ್ರವೇ ಭರ್ತಿ ಎಂದ ಪರಮೇಶ್ವರ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ರಾಜ್ಯದಲ್ಲಿ ನಿರುದ್ಯೋಗಕ್ಕೆ ಸಂಬಂಧಿಸಿದಂತೆ ಬೃಹತ್‌ ಪ್ರತಿಭಟನೆಗಳು ನಡೆಯುತ್ತಿವೆ, ಇತ್ತ ಗೃಹ ಸಚಿವ ಜಿ.ಪರಮೇಶ್ವರ ಅಗ್ನಿಶಾಮಕ ಹಾಗೂ ತುರ್ತುಸೇವೆಗಳ ಇಲಾಖೆಯಲ್ಲಿ ಸಾಕಷ್ಟು ಹುದ್ದೆ ಖಾಲಿ ಇದೆ. ಅದನ್ನು ಶೀಘ್ರವೇ ಭರ್ತಿ ಮಾಡುತ್ತೇವೆ ಎಂದು ಆಶ್ವಾಸನೆ ನೀಡಿದ್ದಾರೆ.

ಈ ಇಲಾಖೆಯಲ್ಲಿ 1,600ಕ್ಕೂ ಅಧಿಕ ಹುದ್ದೆಗಳನ್ನು ತುಂಬುವ ಸಂಬಂಧ ಮುಖ್ಯಮಂತ್ರಿಗಳಿಗೆ ಪ್ರಸ್ತಾವನೆ ಸಲ್ಲಿಸಿದ್ದು, ಶೀಘ್ರವೇ ಭರ್ತಿ ಮಾಡಲಾಗುವುದು. 15 ಹೊಸ ತಾಲ್ಲೂಕುಗಳಲ್ಲಿ ಅಗ್ನಿ ಶಾಮಕ ಠಾಣೆಗಳನ್ನು ಸ್ಥಾಪಿಸಲು ಮುಖ್ಯಮಂತ್ರಿಯವರನ್ನು ಕೋರಿದ್ದೇನೆ. ಪೊಲೀಸ್ ಗೃಹ ಯೋಜನೆಯಡಿ 40 ಸಾವಿರ ಮನೆ ಕಟ್ಟಿದ್ದೇವೆ. ಅದೇ ಮಾದರಿಯಲ್ಲಿ ಅಗ್ನಿಶಾಮಕ ಸಿಬ್ಬಂದಿಗಳಿಗೆ ವಸತಿ ಗೃಹ ಕಲ್ಪಿಸುವ ತೀರ್ಮಾನ ಮಾಡಲಾಗಿದೆ. ಇದಕ್ಕೆ ಹಣ ಒದಗಿಸಲಾಗುವುದು ಎಂದು ಗೃಹಸಚಿವರು ತಿಳಿಸಿದರು.

Must Read