ಹೊಸದಿಗಂತ ಡಿಜಿಟಲ್ ಡೆಸ್ಕ್:
ನೂತನ ಐಸಿಸಿ T20 Rankings ನಲ್ಲಿ ಭಾರತದ ಸ್ಟಾರ್ ವೇಗಿ ಜಸ್ಪ್ರೀತ್ ಬುಮ್ರಾ ಭಾರೀ ಏರಿಕೆ ಕಂಡಿದ್ದು, ಏಳು ಸ್ಥಾನಗಳ ಪ್ರಗತಿಯೊಂದಿಗೆ ಅಗ್ರ 10ರಲ್ಲಿ ಸ್ಥಾನ ಪಡೆದಿದ್ದಾರೆ. ಪ್ರಸ್ತುತ 669 ರೇಟಿಂಗ್ ಅಂಕದೊಂದಿಗೆ ಎಂಟನೇ ಸ್ಥಾನಕ್ಕೆ ತಲುಪಿದ್ದಾರೆ.
ಹಾಲಿ ಟಿ20 ವಿಶ್ವಕಪ್‌ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧದ 15 ರನ್‌ಗೆ 3 ವಿಕೆಟ್ ಕಬಳಿಸಿದ್ದು ಅವರ ಶ್ರೇಯಾಂಕದಲ್ಲಿ ಗಮನಾರ್ಹ ಜಿಗಿತಕ್ಕೆ ಕಾರಣವಾಯಿತು.
ದಕ್ಷಿಣ ಆಫ್ರಿಕಾದ ಕಾರ್ಬಿನ್ ಬಾಷ್ 21 ಸ್ಥಾನಗಳ ಭಾರಿ ಜಿಗಿತವನ್ನು ಸಾಧಿಸಿ T20I ಬೌಲರ್‌ಗಳ ಶ್ರೇಯಾಂಕದಲ್ಲಿ ಮೂರನೇ ಸ್ಥಾನವನ್ನು ತಲುಪಿದರೆ,ವೆಸ್ಟ್ ಇಂಡೀಸ್ ಫೋರ್ಡ್ 23 ಸ್ಥಾನಗಳ ಏರಿಕೆ ಕಂಡು ಏಳನೇ ಸ್ಥಾನವನ್ನು ತಲುಪಿದ್ದಾರೆ.
ಜಿಂಬಾಬ್ವೆ ನಾಯಕ ಸಿಕಂದರ್ ರಜಾ ಬ್ಯಾಟಿಂಗ್‌ನಲ್ಲಿ ಉತ್ತಮ ಪ್ರದರ್ಶನ ನೀಡಿದ್ದರಿಂದ ಐಸಿಸಿ ಟಿ20ಐ ಆಲ್‌ರೌಂಡರ್‌ಗಳ ಶ್ರೇಯಾಂಕದಲ್ಲಿ ಅಗ್ರಸ್ಥಾನಕ್ಕೇರಿದ್ದಾರೆ. ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ ರಜಾ 45 ರನ್ ಗಳಿಸಿದರು, ಸೂಪರ್ ಎಂಟರ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ವಿರುದ್ಧ 27 ರನ್ ಗಳಿಸಿದ್ದರು.
ಭಾರತದ ಸ್ಟಾರ್ ಆಟಗಾರ ತಿಲಕ್ ವರ್ಮಾ ಬ್ಯಾಟ್ಸ್‌ಮನ್‌ಗಳ ಶ್ರೇಯಾಂಕದಲ್ಲಿ ಮೂರು ಸ್ಥಾನ ಕುಸಿದು ಏಳನೇ ಸ್ಥಾನಕ್ಕೆ ತಲುಪಿದ್ದಾರೆ. ಏತನ್ಮಧ್ಯೆ, ಇಶಾನ್ ಕಿಶನ್ ಕಳೆದ ದಕ್ಷಿಣ ಆಫ್ರಿಕಾ ವಿರುದ್ಧ ಸೊನ್ನೆ ಸುತ್ತಿದ್ದರೂ ಮೂರು ಸ್ಥಾನಗಳ ಜಿಗಿತ ಕಂಡಿದ್ದಾರೆ. ಸತತ ಬ್ಯಾಟಿಂಗ್ ವೈಫಲ್ಯದ ಮಧ್ಯೆಯೂ ಅಭಿಷೇಕ್ ಶರ್ಮ ನಂ.1 ಸ್ಥಾನ ಉಳಿಸಿಕೊಂಡಿದ್ದಾರೆ.



