February 25, 2026
Wednesday, February 25, 2026
spot_img

ಪ್ರೇಮ ವೈಫಲ್ಯಕ್ಕೆ ನೊಂದು ಆ*ತ್ಮಹ*ತ್ಯೆ ಮಾಡಿಕೊಂಡ ಯೂಟ್ಯೂಬರ್!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಾಜಿ ಪ್ರಿಯತಮನ ಜೊತೆಗಿನ ಮನಸ್ತಾಪದಿಂದ ತೆಲುಗಿನ ಜನಪ್ರಿಯ ಯೂಟ್ಯೂಬರ್ ಕೋಮಲಿ (21) ಆತ್ಮಹತ್ಯೆ ಮಾಡಿಕೊಂಡ ಘಟನೆ ಹೈದರಾಬಾದ್ ನ ರಾಯದುರ್ಗಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ .

ಮೂಲತಃ ವಿಶಾಖಪಟ್ಟಣದ ಕೋಮಲಿ, ಮಲ್ಲಾರೆಡ್ಡಿ ವಿಶ್ವವಿದ್ಯಾಲಯದಲ್ಲಿ ಬಿ.ಎಸ್ಸಿ ವ್ಯಾಸಂಗ ಮಾಡುತ್ತಿದ್ದರು. ಕಳೆದ ಮೂರು ವರ್ಷಗಳಿಂದ ಸಾಫ್ಟ್‌ವೇರ್ ಇಂಜಿನಿಯರ್ ಹಾಗೂ ಸಹ ಯೂಟ್ಯೂಬರ್ ಆಗಿರುವ ನಿಖಿಲ್ ರೆಡ್ಡಿ ಎಂಬುವವರ ಜೊತೆ ಪ್ರೇಮ ಸಂಬಂಧ ಹೊಂದಿದ್ದರು. ಆದರೆ, ಇತ್ತೀಚೆಗೆ ಇಬ್ಬರ ನಡುವೆ ಬ್ರೇಕಪ್ ಆಗಿದ್ದು, ಇದರಿಂದ ಕೋಮಲಿ ತೀವ್ರ ಖಿನ್ನತೆಗೆ ಒಳಗಾಗಿದ್ದರು.

ಮದುವೆ ವಿಚಾರವಾಗಿ ಇಬ್ಬರ ನಡುವೆ ಜಗಳ ನಡೆದಿದೆ ಎನ್ನಲಾಗಿದೆ. ಈ ಗಲಾಟೆಯಿಂದ ತೀವ್ರ ಮನನೊಂದ ಕೋಮಲಿ, ಮನೆಯಲ್ಲಿ ಯಾರೂ ಇಲ್ಲದ ವೇಳೆ ಸೀರೆಯಿಂದ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ರಾಯದುರ್ಗಂ ಪೊಲೀಸ್ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಮುಂದುವರಿಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಒಸ್ಮಾನಿಯಾ ಆಸ್ಪತ್ರೆಗೆ ರವಾನಿಸಲಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !