February 26, 2026
Thursday, February 26, 2026
spot_img

ಎಂಟು ವಾರಗಳ ನಂತರವೇ ಒಟಿಟಿಯಲ್ಲಿ ಬಿಡುಗಡೆ: ತೆಲುಗು ಸಿನಿಮಾ ಚೇಂಬರ್ ಹೊಸ ರೂಲ್ಸ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಚಿತ್ರಮಂದಿರಗಳಿಗೆ ಪ್ರೇಕ್ಷಕರ ಸಂಖ್ಯೆ ಕಡಿಮೆಯಾಗುತ್ತಿರುವ ಹಿನ್ನೆಲೆಯಲ್ಲಿ ತೆಲುಗು ಚಿತ್ರರಂಗ ಮಹತ್ವದ ತೀರ್ಮಾನ ಕೈಗೊಂಡಿದೆ. ಇನ್ನು ಮುಂದೆ ಬಿಡುಗಡೆಯಾಗುವ ಹೊಸ ತೆಲುಗು ಸಿನಿಮಾಗಳು ಥಿಯೇಟರ್‌ನಲ್ಲಿ ಬಿಡುಗಡೆಯಾದ ಬಳಿಕ ಕನಿಷ್ಠ 8 ವಾರಗಳ ನಂತರ ಮಾತ್ರ ಒಟಿಟಿ ವೇದಿಕೆಗಳಿಗೆ ಬರಬೇಕು ಎಂದು ನಿಯಮ ಜಾರಿಗೊಳಿಸಲಾಗಿದೆ.

ಸಿನಿಮಾ ವಿತರಕರು, ಪ್ರದರ್ಶಕರು ಹಾಗೂ ನಿರ್ಮಾಪಕರೊಂದಿಗೆ ನಡೆದ ಸಭೆಯಲ್ಲಿ ಈ ನಿರ್ಧಾರಕ್ಕೆ ಒಪ್ಪಿಗೆ ವ್ಯಕ್ತವಾಗಿದೆ. ಸುಮಾರು 40ಕ್ಕೂ ಹೆಚ್ಚು ಮಂದಿ ಭಾಗವಹಿಸಿದ ಚರ್ಚೆಯಲ್ಲಿ ಚಿತ್ರಮಂದಿರಗಳ ರಕ್ಷಣೆಗಾಗಿ ಕಟ್ಟುನಿಟ್ಟಿನ ಕ್ರಮ ಅಗತ್ಯವೆಂದು ಅಭಿಪ್ರಾಯ ವ್ಯಕ್ತವಾಯಿತು.

ಇದನ್ನೂ ಓದಿ:

ಎಕ್ಸಿಕ್ಯೂಟಿವ್ ಸಮಿತಿಯು ಈ ನಿರ್ಧಾರವನ್ನು ಅಂಗೀಕರಿಸಿದ್ದು, ಮುಂದಿನ ದಿನಗಳಲ್ಲಿ ನಿರ್ಮಾಣವಾಗುವ ಚಿತ್ರಗಳಿಗೆ ಮಾತ್ರ ಇದು ಅನ್ವಯವಾಗಲಿದೆ. ಈಗಾಗಲೇ ನಿರ್ಮಾಣ ಹಂತದಲ್ಲಿರುವ ಅಥವಾ 60% ಚಿತ್ರೀಕರಣ ಪೂರ್ಣಗೊಂಡ ಸಿನಿಮಾಗಳಿಗೆ ಈ ನಿಯಮ ಅನ್ವಯಿಸುವುದಿಲ್ಲ.

ಬಾಲಿವುಡ್‌ನಲ್ಲಿ ಇದೇ ರೀತಿಯ ನಿಯಮ ಈಗಾಗಲೇ ಜಾರಿಯಲ್ಲಿದೆ. ತಮಿಳು ಮತ್ತು ಮಲಯಾಳಂ ಚಿತ್ರರಂಗದಲ್ಲೂ ನಿರ್ದಿಷ್ಟ ಅವಧಿಯ ಬಳಿಕ ಒಟಿಟಿ ಬಿಡುಗಡೆ ಪದ್ಧತಿ ಇದೆ. ಆದರೆ ಕನ್ನಡ ಚಿತ್ರರಂಗದಲ್ಲಿ ಇಂತಹ ಸ್ಪಷ್ಟ ನಿಯಮ ಇನ್ನೂ ಜಾರಿಯಾಗಿಲ್ಲ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !