February 28, 2026
Saturday, February 28, 2026
spot_img

ಎನ್‌ಸಿಪಿ ರಾಷ್ಟ್ರೀಯ ಅಧ್ಯಕ್ಷೆಯಾಗಿ ಸುನೇತ್ರಾ ಪವಾರ್ ಆಯ್ಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮುಂಬೈ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷ (ಎನ್‌ಸಿಪಿ) ತನ್ನ ಹೊಸ ರಾಷ್ಟ್ರೀಯ ಅಧ್ಯಕ್ಷೆಯಾಗಿ ಸುನೇತ್ರಾ ಪವಾರ್ ಅವರನ್ನು ಘೋಷಿಸಿದೆ.

ಬಾರಾಮತಿಯಲ್ಲಿ ನಡೆದ ದುರ್ಘಟನೆಯಲ್ಲಿ ಉಪಮುಖ್ಯಮಂತ್ರಿ ಅಜಿತ್ ಪವಾರ್ ನಿಧನರಾದ ಬಳಿಕ ಅವರ ಸ್ಥಾನವನ್ನು ಇದೀಗ ಸುನೇತ್ರಾ ಪವಾರ್ ವಹಿಸಿಕೊಂಡಿದ್ದಾರೆ.

ಹಿರಿಯ ನಾಯಕ ಪ್ರಫುಲ್ ಪಟೇಲ್ ಅಧಿಕೃತ ಪ್ರಕಟಣೆ ನೀಡಿ ಈ ನಿರ್ಧಾರವನ್ನು ತಿಳಿಸಿದರು. ಪಕ್ಷದ ಶಾಸಕರ ಬಹುಮತ ಬೆಂಬಲದೊಂದಿಗೆ ಸುನೇತ್ರಾ ಪವಾರ್ ಅವರ ಹೆಸರನ್ನು ಮುಂದಿರಿಸಲಾಗಿತ್ತು. ಕಳೆದ ಕೆಲವು ದಿನಗಳಿಂದಲೇ ಈ ನೇಮಕಾತಿ ಬಗ್ಗೆ ಚರ್ಚೆಗಳು ಜೋರಾಗಿದ್ದವು.

ಇದನ್ನೂ ಓದಿ:

ಪತಿಯ ಅಗಲಿಕೆಯಿಂದ 13 ದಿನಗಳ ನಂತರವೇ ಉಪಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದ ಸುನೇತ್ರಾ ಪವಾರ್, ಈಗ ಪಕ್ಷದ ರಾಷ್ಟ್ರೀಯ ನಾಯಕರಾಗಿ ಹೆಚ್ಚುವರಿ ಜವಾಬ್ದಾರಿ ಹೊತ್ತಿದ್ದಾರೆ.

ಈ ನೇಮಕಾತಿ ಎನ್‌ಸಿಪಿ ರಾಜಕೀಯದಲ್ಲಿ ಹೊಸ ಅಧ್ಯಾಯಕ್ಕೆ ನಾಂದಿ ಹಾಡಿದ್ದು, ಮುಂದಿನ ರಾಜಕೀಯ ಚಟುವಟಿಕೆಗಳತ್ತ ಎಲ್ಲರ ಗಮನ ಹರಿದಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !