ಹೊಸದಿಗಂತ ವರದಿ ಹುಬ್ಬಳ್ಳಿ:
ಮೊಟ್ಟ ಮೊದಲ ಬಾರಿಗೆ ರಣಜಿ ಟೂರ್ನಿಯ ಫೈನಲ್ ಪ್ರವೇಶಿಸಿದ ಕಣಿವೆ ರಾಜ್ಯ ತಂಡದ ಪಂದ್ಯ ವೀಕ್ಷಿಸಲು ಜಮ್ಮು ಕಾಶ್ಮೀರ ಸಿಎಂ ಒಮರ್ ಅಬ್ದುಲ್ಲಾ ಆಗಮಿಸಲಿದ್ದಾರೆ.
ಇಲ್ಲಿನ ರಾಜನಗರ ಕೆ.ಎಸ್.ಸಿ.ಎ ಕ್ರೀಡಾಂಗಣದಲ್ಲಿ ಕರ್ನಾಟಕ ಮತ್ತು ಜಮ್ಮು- ಕಾಶ್ಮೀರ ನಡುವಿನ ರಣಜಿ ಟ್ರೋಫಿ ಕ್ರಿಕೆಟ್ ಟೂರ್ನಿಯ ಫೈನಲ್ ನಡೆಯುತ್ತಿದೆ.
ಇದನ್ನೂ ಓದಿ:
ಜಮ್ಮು ಕಾಶ್ಮೀರ ತಂಡ ಪ್ರಥಮ ಇನ್ನಿಂಗ್ಸ್ ನಲ್ಲಿ 584 ರನ್ ಗಳಿಸಿದೆ. ಕರ್ನಾಟಕ ತಂಡಕ್ಕೆ ಸವಾಲನ್ನೊಡಿದೆ.
ಕರ್ನಾಕ ಗುರುವಾರ 3 ನೇ ದಿನದಾಟದ ಅಂತ್ಯಕ್ಕೆ 5 ವಿಕೆಟ್ ನಷ್ಟಕ್ಕೆ 291 ನ್ ಗಳಿಸಿತ್ತು. ಶುಕ್ರವಾರ ನಾಲ್ಕನೇ ದಿನದಾಟ ಆರಂಭಿಸಿದ್ದು, 6 ವಿಕೆಟ್ ಗೆ 241 ರನ್ ಗಳಿಸಿದೆ.
ಶುಕ್ರವಾರ ಸಂಜೆ 7.20ಕ್ಕೆ ಹುಬ್ಬಳ್ಳಿಗೆ ಬರುವ ಅವರು ಶನಿವಾರ ಬೆಳಿಗ್ಗೆ 10 ಗಂಟೆಗೆ ಕ್ರೀಡಾಂಗಣಕ್ಕೆ ಭೇಟಿ ನೀಡಿ ಐದನೇ ದಿನದ ಆಟ ವೀಕ್ಷಿಸಲಿದ್ದಾರೆ. ಮೈದಾನದಲ್ಲಿ ಈಗಲೇ ಭದ್ರತಾ ವ್ಯವಸ್ಥೆ ಹೆಚ್ಚಿಸಲಾಗಿದೆ. ಜಮ್ಮು-ಕಾಶ್ಮೀರದ ಐತಿಹಾಸಿಕ ಸಾಧನೆ ನೋಡಲಿದ್ದಾರೆ.



