September 27, 2026
Sunday, September 27, 2026
spot_img

ಮಹಿಳೆಯರು, ಮಂಗಳಮುಖಿಯರಿಗೆ ಉಚಿತ ಆಟೋ ತರಬೇತಿ: ಸಚಿವ ರಾಮಲಿಂಗಾ ರೆಡ್ಡಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೆಂಗಳೂರು ನಗರದಲ್ಲಿ ಮಹಿಳೆಯರು ಮತ್ತು ಮಂಗಳಮುಖಿಯರನ್ನು ಆರ್ಥಿಕವಾಗಿ ಸ್ವಾವಲಂಬಿಗಳನ್ನಾಗಿಸುವ ಉದ್ದೇಶದಿಂದ ಉಚಿತ ಆಟೋ ಚಾಲನಾ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಬಿಟಿಎಂ ಲೇಔಟ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿ ಯೋಜನೆಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಮಹಿಳೆ ಹಾಗೂ ಮಂಗಳಮುಖಿಯರಿಗೆ ಉದ್ಯೋಗಾವಕಾಶ ಕಲ್ಪಿಸುವುದು ಸಮಾಜದ ಸಮಾನತೆಯತ್ತ ಮಹತ್ವದ ಹೆಜ್ಜೆ ಎಂದು ಸಚಿವರು ಅಭಿಪ್ರಾಯಪಟ್ಟರು.

ಇದನ್ನೂ ಓದಿ:

ಬೆಂಗಳೂರಿನ ಸಾರಿಗೆ ವ್ಯವಸ್ಥೆಯಲ್ಲಿ ಆಟೋಗಳ ಪಾತ್ರ ಅತ್ಯಂತ ಮುಖ್ಯವಾಗಿದ್ದು, ನಗರ ಜನಜೀವನದ ಅವಿಭಾಜ್ಯ ಅಂಗವಾಗಿದೆ. ಆಟೋ ಚಾಲಕರ ಕಲ್ಯಾಣಕ್ಕಾಗಿ ಇನ್ನಷ್ಟು ಯೋಜನೆಗಳನ್ನು ಜಾರಿಗೆ ತರುವ ಕುರಿತು ಸರ್ಕಾರ ಚಿಂತನೆ ನಡೆಸಲಿದೆ. ರಾಜ್ಯ ಬಜೆಟ್ ನಂತರ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಅವರು ತಿಳಿಸಿದರು.

ಈಗಾಗಲೇ ನಗರದ ಒಂಬತ್ತು ವಿಧಾನಸಭಾ ಕ್ಷೇತ್ರಗಳಲ್ಲಿ 500ಕ್ಕೂ ಹೆಚ್ಚು ಮಹಿಳೆಯರು ಮತ್ತು ಮಂಗಳಮುಖಿಯರಿಗೆ ಪ್ರಮಾಣಿತ ಆಟೋ ಚಾಲನಾ ತರಬೇತಿ ನೀಡಲಾಗಿದೆ. ಮುಂದಿನ ಹಂತದಲ್ಲಿ ಈ ಯೋಜನೆಯನ್ನು ಎಲ್ಲಾ ಕ್ಷೇತ್ರಗಳಿಗೆ ವಿಸ್ತರಿಸುವ ಉದ್ದೇಶವಿದೆ ಎಂದು ಆಯೋಜಕರು ಮಾಹಿತಿ ನೀಡಿದ್ದಾರೆ.

Must Read