ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಶ್ಚಿಮ ಬಂಗಾಳದ ರಾಜಧಾನಿ ಕೋಲ್ಕತ್ತಾದಲ್ಲಿ ಭೂಕಂಪ ಸಂಭವಿಸಿದ್ದು, ಜನ ಭಯಭೀತರಾಗಿ ಕಟ್ಟಡಗಳಿಂದ ಹೊರಕ್ಕೆ ಓಡಿಬಂದಿದ್ದಾರೆ.
ಇಂದು ಮಧ್ಯಾಹ್ನ ಮಧ್ಯಾಹ್ನ 1:22 ಸುಮಾರಿಗೆ 5.4 ತೀವ್ರತೆಯ ಭೂಕಂಪ ಸಂಭವಿಸಿದೆ. ಯುರೋಪಿಯನ್ ಮೆಡಿಟರೇನಿಯನ್ ಭೂಕಂಪನ ಕೇಂದ್ರದ ಪ್ರಕಾರ, ಬಾಂಗ್ಲಾದೇಶದ ಢಾಕಾದ ಅಗರ್‌ಗಾಂವ್‌ನಲ್ಲಿರುವ 35 ಕಿ.ಮೀ ಆಳದಲ್ಲಿ ಕೇಂದ್ರಬಿಂದು ಪತ್ತೆಯಾಗಿದೆ.
ಭೂಮಿ ಕಂಪಿಸಿದ ಅನುಭವವಾಗುತ್ತಿದ್ದಂತೆಯೇ ಜನ ಬಿಲ್ಡಿಂಗ್‌ಗಳಿಂದ ಓಡಿ ಹೊರಕ್ಕೆ ಬಂದಿದ್ದಾರೆ. ಪಶ್ಚಿಮ ಬಂಗಾಳದ ಹಲವು ಕಡೆ ಭೂಮಿ ಕಂಪಿಸಿದ ಅನುಭವಾಗಿದೆ. ಕೋಲ್ಕತ್ತಾದಲ್ಲಿ ಕೇಂದ್ರ ಸಚಿವ ಸುಕಾಂತ ಮಜುಂದಾರ್ ವೇದಿಕೆಯಲ್ಲಿ ಮಾತನಾಡುತ್ತಿದ್ದರು. ಈ ಸಂದರ್ಭದಲ್ಲಿ ಕಂಪನದ ಅನುಭವವಾಗಿದೆ. ಸಚಿವರು ಏನಾಯಿತು ಏನಾಯಿತು ಎಂದು ಸಭಿಕರನ್ನು ಪ್ರಶ್ನಿಸಿ ನಂತರ ಭಾಷಣ ಮುಂದುವರಿಸಿದರು.



