Sunday, August 31, 2025

ಮಳೆಯಿಂದಾಗುವ ಅನಾಹುತ ತಪ್ಪಿಸಲು ತಕ್ಷಣ ತುರ್ತು ಕ್ರಮ ಕೈಗೊಳ್ಳೋದು ಅಗತ್ಯ: ಖಂಡ್ರೆ ಸೂಚನೆ

ಹೊಸದಿಗಂತ ಬೀದರ್

ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಅಗುವ ಅನಾಹುತಗಳನ್ನು ತಪ್ಪಿಸಲು ತಕ್ಷಣ ತುರ್ತು ಕ್ರಮಗಳನ್ನು ಕೈಗೊಳ್ಳಲು ಅರಣ್ಯ, ಪರಿಸರ ಮತ್ತು ಜೀವಶಾಸ್ತ್ರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಅತಿವೃಷ್ಟಿ ನಿರ್ವಹಣೆ ಮಾಡುವ ದೃಷ್ಟಿಯಿಂದ ಎಲ್ಲಾ ಅಧಿಕಾರಿಗಳು ಕೇಂದ್ರಸ್ಥಾನದಲ್ಲಿದ್ದು , ಕಾರ್ಯ ನಿರ್ವಹಿಸಲು ಮತ್ತು ಅನಿವಾರ್ಯ ಸಂದರ್ಭ ಹೊರತುಪಡಿಸಿ ರಜೆ ಮಾಡದಿರಲು ಸೂಚನೆ ನೀಡಿದ್ದಾರೆ. ಪ್ರವಾಹ ಪರಿಸ್ಥಿತಿಯನ್ನು ಪರಿಣಾಮಕಾರಿಯಾಗಿ ನಿರ್ವಹಿಸಲು SDRF ಮತ್ತು NDRF ಗಳನ್ನು ಕಾರ್ಯಸನ್ನದಗೊಳಿಸಿ, ವಿಳಂಬಕ್ಕೆ ಅವಕಾಶ ಮಾಡಿದೆ ಪರಿಹಾರ ಕ್ರಮ ಕೈಗೊಳ್ಳಲು ಹಾಗೂ ಅತಿವೃಷ್ಟಿ ಪ್ರದೇಶಗಳಿಗೆ ಸಂಬಂಧಪಟ್ಟ ಉಪ ವಿಭಾಗಾಧಿಕಾರಿ ಕಡ್ಡಾಯವಾಗಿ ಭೇಟಿ ನೀಡಬೇಕು ಮತ್ತು ಹೆಚ್ಚು ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಸಂಬಂಧಿಸಿದ ಇಲಾಖೆಗಳನ್ನೊಗೊಂಡ ತಂಡವು ಖುದ್ದು ಮೊಕ್ಕಾಂ ಹುಡುವುದು. ಹವಾಮಾನ ಇಲಾಖೆ ಮುನ್ಸೂಚನೆ, ಮಳೆ ದತ್ತಾಂಶನ್ನಾಧರಿಸಿ, ಪ್ರವಾಹ ಉಂಟಾಗಬಹುದಾದ ಪ್ರದೇಶಗಳಲ್ಲಿ ಸಂಬಂಧಿಸಿದ ಇಲಾಖೆಗಳಿಂದ ಮುಂಜಾಗೃತಾ ಕ್ರಮಗಳನ್ನು ಕೈಗೊಂಡು ಜಾರಿಗೊಳಿಸಲು  ಸೂಚಿಸಿದ್ದಾರೆ.

ಇದನ್ನೂ ಓದಿ