ಹೊಸದಿಗಂತ ಡಿಜಿಟಲ್ ಡೆಸ್ಕ್:
ಇರಾನ್ ಮತ್ತು ಇಸ್ರೇಲ್ ನಡುವೆ ಮತ್ತೆ ಯುದ್ಧದ ಆತಂಕ ತೀವ್ರಗೊಂಡಿದೆ. ಶನಿವಾರ ಇರಾನ್ ರಾಜಧಾನಿ ಟೆಹರಾನ್ ಮೇಲೆ ಇಸ್ರೇಲ್ ಕ್ಷಿಪಣಿ ದಾಳಿ ನಡೆಸಿದ ಪರಿಣಾಮ ನಗರದೆಲ್ಲೆಡೆ ಭಾರಿ ಸ್ಫೋಟಗಳು ಸಂಭವಿಸಿವೆ.
ಇರಾನ್‌ನ ಸರ್ವೋಚ್ಚ ನಾಯಕ ಅಲಿ ಖಮೇನಿ ಹಾಗೂ ಅಧ್ಯಕ್ಷ ಮಸೂದ್ ಪೆಜೆಶ್ಕಿಯಾನ್ ಅವರ ಭವನಗಳನ್ನು ಗುರಿಯಾಗಿಸಿ ದಾಳಿ ನಡೆಸಲಾಗಿದೆ ಎಂಬ ಮಾಹಿತಿ ಹೊರಬಿದ್ದಿದೆ. ಸ್ಫೋಟಗಳ ಸದ್ದುಗಳಿಂದ ನಾಗರಿಕರು ಆತಂಕಗೊಂಡಿದ್ದು, ಭದ್ರತಾ ಪಡೆಗಳು ಹೈ ಅಲರ್ಟ್ ಘೋಷಿಸಿವೆ.
ಇದನ್ನೂ ಓದಿ:
ಇಸ್ರೇಲ್ ಅಧಿಕಾರಿಗಳ ಪ್ರಕಾರ, ಇರಾನ್ ತನ್ನ ಅಣು ಮತ್ತು ಬ್ಯಾಲಿಸ್ಟಿಕ್ ಕ್ಷಿಪಣಿ ಯೋಜನೆಗಳನ್ನು ಮುಂದುವರಿಸುವ ಸೂಚನೆ ನೀಡಿದ್ದರಿಂದ ಮುನ್ನೆಚ್ಚರಿಕಾ ಕ್ರಮವಾಗಿ ಈ ಕಾರ್ಯಾಚರಣೆ ಕೈಗೊಳ್ಳಲಾಗಿದೆ. ಕಳೆದ ವರ್ಷ ನಡೆದ 12 ದಿನಗಳ ವಾಯು ಸಂಘರ್ಷದ ಬಳಿಕ ಇದು ನಡೆದ ಪ್ರಮುಖ ದಾಳಿ ಎಂದು ಹೇಳಲಾಗಿದೆ. ಅಮೆರಿಕದೊಂದಿಗೆ ಸಮನ್ವಯದಲ್ಲಿ ಈ ಕಾರ್ಯಾಚರಣೆ ನಡೆದಿರುವುದಾಗಿ ಇಸ್ರೇಲ್ ರಕ್ಷಣಾ ವಲಯ ತಿಳಿಸಿದೆ.



