ಹೊಸದಿಗಂತ ಡಿಜಿಟಲ್ ಡೆಸ್ಕ್:
ನಟ ಡಾ. ವಿಷ್ಣುವರ್ಧನ್ ಅವರಿಗೆ ಮರಣೋತ್ತರ ಕರ್ನಾಟಕ ರತ್ನ ನೀಡುವಂತೆ ಅವರ ಅಳಿಯ ಅನಿರುದ್ಧ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದ್ದಾರೆ.
ಬೆಂಗಳೂರಿನ ಕಾವೇರಿ ನಿವಾಸದಲ್ಲಿ ಸಿಎಂ ಅವರನ್ನು ಭೇಟಿಯಾದ ಅನಿರುದ್ಧ ಈ ಕುರಿತು ಮನವಿ ಪತ್ರ ನೀಡಿದ್ದಾರೆ.
ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅನಿರುದ್ಧ ಅವರು, ” ಈ ಹಿಂದೆ ಕೂಡ ಸಿಎಂ ಅವರು ಈ ವಿಷಯದ ಬಗ್ಗೆ ಸಕಾರಾತ್ಮಕವಾಗಿ ಸ್ಪಂದಿಸಿದ್ದರು. ಇಂದು ಕೂಡ ಅದೇ ರೀತಿ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಈ ವಿಷಯದ ಬಗ್ಗೆ ಸಚಿವ ಸಂಪುಟದಲ್ಲಿ ಚರ್ಚಿಸಿ ನಿರ್ಧಾರ ತೆಗೆದುಕೊಳ್ಳುವುದಾಗಿ ತಿಳಿಸಿದ್ದಾರೆ” ಎಂದು ಹೇಳಿದರು.