April 3, 2026
Friday, April 3, 2026
spot_img

ಕಬ್ಬು ಬೆಳೆಗಾರರಿಗೆ ಸಿಹಿ ಸುದ್ದಿ: ಪ್ರತಿ ಟನ್‌ಗೆ 100 ರೂಪಾಯಿ ಹೆಚ್ಚುವರಿ ದರ ಪಾವತಿಗೆ ರಾಜ್ಯ ಸರ್ಕಾರದ ಗ್ರೀನ್ ಸಿಗ್ನಲ್

ಹೊಸದಿಗಂತ ಡಿಜಿಟಲ್ ಡೆಸ್ಕ್:

2025-26ರ ಹಂಗಾಮಿನಲ್ಲಿ ಸಕ್ಕರೆ ಕಾರ್ಖಾನೆಗಳಿಗೆ ಕಬ್ಬು ಪೂರೈಕೆ ಮಾಡಿದ ರೈತರಿಗೆ, ಕಾರ್ಖಾನೆಗಳು ಪಾವತಿಸಬೇಕಾದ ಎಫ್.ಆರ್.ಪಿ. ದರ ಹೊರತುಪಡಿಸಿ ಹೆಚ್ಚುವರಿಯಾಗಿ ರಾಜ್ಯ ಸರ್ಕಾರದಿಂದ 50 ರೂಪಾಯಿಯನ್ನು ಪಾವತಿಸಲು ತೀರ್ಮಾನಿಸಲಾಗಿದೆ ಎಂದು ಮಂಡ್ಯ ಜಿಲ್ಲಾಧಿಕಾರಿ ಡಾ. ಕುಮಾರ ತಿಳಿಸಿದ್ದಾರೆ.

ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಇದರೊಂದಿಗೆ ಸಕ್ಕರೆ ಕಾರ್ಖಾನೆಗಳ ವತಿಯಿಂದಲೂ ಪ್ರತಿ ಟನ್‌ಗೆ 50 ರೂಪಾಯಿಯನ್ನು ಹೆಚ್ಚುವರಿಯಾಗಿ ಪಾವತಿಸಲಾಗುತ್ತದೆ ರೈತರಿಗೆ ಒಟ್ಟಾರೆಯಾಗಿ ಪ್ರತಿ ಟನ್‌ಗೆ 100 ರೂಪಾಯಿ ಹೆಚ್ಚುವರಿ ಮೊತ್ತ ಪಾವತಿಸಲು ಕ್ರಮ ವಹಿಸಲಾಗಿದೆ. ಸರ್ಕಾರದ ಆದೇಶದಂತೆ ಅನುದಾನ ಬಿಡುಗಡೆ ಮಾಡಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು. ಈ ಸಭೆಯಲ್ಲಿ ಸಕ್ಕರೆ ಕಾರ್ಖಾನೆಗಳ ಅಧಿಕಾರಿಗಳು ಹಾಗೂ ಜಿಲ್ಲಾ ಖಜಾನೆ ಅಧಿಕಾರಿಗಳು ಉಪಸ್ಥಿತರಿದ್ದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !