February 28, 2026
Saturday, February 28, 2026
spot_img

ಮಂಗಳೂರಿನಲ್ಲಿ ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಡಿಕ್ಕಿಯಾಗಿ ಅಂಗಡಿಗೆ ನುಗ್ಗಿದ ಥಾರ್!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಂಗಳೂರು ನಗರದ ಪದವಿನಂಗಡಿ ಎಂಬಲ್ಲಿ ಥಾರ್ ವಾಹನವೊಂದು ಸ್ಕೂಟರ್ ಹಾಗೂ ಬೈಕ್‌ಗೆ ಡಿಕ್ಕಿ ಹೊಡೆದು ಬಳಿಕ ರಸ್ತೆ ಬದಿಯ ಅಂಗಡಿಗೆ ನುಗ್ಗಿದ ಘಟನೆ ಶನಿವಾರ ನಡೆದಿದ್ದು ನಡೆದಿದ್ದು, ಈ ಅವಘಡದಲ್ಲಿ ದ್ವಚಿಕ್ರ ವಾಹನ ಸವಾರ ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸ್ಥಿತಿ ಚಿಂತಾಜನಕವಾಗಿದೆ.

ಗಾಯಾಳುವಿನ ವಿವರಗಳು ಇನ್ನಷ್ಟೇ ಲಭ್ಯವಾಗಬೇಕಿದೆ.


ಈ ದುರಂತದ ಕ್ಷಣಕ್ಷಣದ ಮಾಹಿತಿಗಳು ಅಲ್ಲೇ ಸಮೀಪದ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಕಾರು ವೇಗವಾಗಿ ಬಂದು ದ್ವಿಚಕ್ರ ವಾಹನಗಳಿಗೆ ಡಿಕ್ಕಿ ಹೊಡೆದು ಅಂಗಡಿಗೆ ನುಗ್ಗಿರುವುದು ದಾಖಲಾಗಿದೆ. ಈ ಬಗ್ಗೆ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !