April 16, 2026
Thursday, April 16, 2026
spot_img

ದ್ವಿತೀಯ ಪಿಯುಸಿ ಪರೀಕ್ಷೆ: ಕಲಬುರಗಿಯಲ್ಲಿ 1062 ವಿದ್ಯಾರ್ಥಿಗಳು ಗೈರು

ಹೊಸದಿಗಂತ ವರದಿ,ಕಲಬುರಗಿ:

ಪ್ರಸಕ್ತ ವರ್ಷದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗೆ ಜಿಲ್ಲೆಯಲ್ಲಿ ಒಟ್ಟು ೧೮,೫೯೮ ವಿದ್ಯಾರ್ಥಿಗಳು ನೋಂದಣಿಯಾಗಿದ್ದರು. ಅದರಲ್ಲಿ ೧೭,೫೩೬ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ೧೦೬೨ ವಿದ್ಯಾರ್ಥಿಗಳು ಗೈರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಕುರಿತು ಮಾಹಿತಿ ನೀಡಿದ ಡಿಡಿಪಿಯು ಸುರೇಶ್ ಅಕ್ಕಣ್ಣ ಅವರು, ಓದು ಸರಿಯಾಗಿ ಮಾಡಿರದಿರುವುದು ಹಾಗೂ ಕೆಲವರು ವೈಯಕ್ತಿಕ ಸಮಸ್ಯೆಗಳಿಂದ ಪರೀಕ್ಷೆಗೆ ಹಾಜರಾಗಲು ಸಾಧ್ಯವಾಗಿಲ್ಲ ಎಂದು ಹೇಳಿದರು.

ಜಿಲ್ಲೆಯ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗಳು ಶಾಂತಿಯುತವಾಗಿ ಹಾಗೂ ಸುಸೂತ್ರವಾಗಿ ನಡೆದಿವೆ. ವಿದ್ಯಾರ್ಥಿಗಳಿಗೆ ಅನುಕೂಲಕರ ವಾತಾವರಣ ಕಲ್ಪಿಸಲು ಅಗತ್ಯ ಸೌಲಭ್ಯಗಳನ್ನು ಒದಗಿಸಲಾಗಿತ್ತು ಎಂದು ಶಿಕ್ಷಣ ಇಲಾಖೆ ತಿಳಿಸಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !