February 28, 2026
Saturday, February 28, 2026
spot_img

ಇಸ್ರೇಲ್ ದಾಳಿಗೆ ಇರಾನ್ ಸರ್ವೋಚ್ಚ ನಾಯಕ ಆಯತೊಲ್ಲಾ ಅಲಿ ಖಮೇನಿ ಸಾವು?

ಹೊಸದಿಗಂತ ಡಿಜಿಟಲ್ ಡೆಸ್ಕ್:

ಅಮೆರಿಕ ಹಾಗೂ ಇಸ್ರೇಲ್​ ನಡೆಸಿದ ವೈಮಾನಿಕ ದಾಳಿಯಲ್ಲಿ ಇರಾನ್‌ನ ಸರ್ವೋಚ್ಚ ನಾಯಕ ಆಯತೊಲ್ಲಾ ಅಲಿ ಖಮೇನಿ ಅವರು ಸಾವನ್ನಪ್ಪಿರುವ ಸಾಧ್ಯತೆ ಇದೆ ಎಂದು ಇಸ್ರೇಲ್‌ನ ಪ್ರಮುಖ ಮಾಧ್ಯಮಗಳು ವರದಿ ಮಾಡಿವೆ.

ಆದಾಗ್ಯೂ, ಈ ಹೇಳಿಕೆಗೆ ಸಂಬಂಧಿಸಿದಂತೆ ಇಸ್ರೇಲಿ ಅಧಿಕಾರಿಗಳಿಂದ ಯಾವುದೇ ಅಧಿಕೃತ ದೃಢೀಕರಣ ಬಂದಿಲ್ಲ.

ಇಸ್ರೇಲ್ ಪ್ರಮುಖ ಚಾನೆಲ್ ಗಳು ವರದಿ ಮಾಡಿದ್ದು, ಟೆಹ್ರಾನ್‌ನಲ್ಲಿರುವ ಖಮೇನಿ ಅವರ ರಹಸ್ಯ ಬಂಕರ್ ಹಾಗೂ ಕಚೇರಿಯನ್ನೇ ಗುರಿಯಾಗಿಸಿಕೊಂಡು ಇಸ್ರೇಲ್​ ದಾಳಿ ನಡೆಸಿದ್ದು, ಈ ವೇಳೆ ಖಮೇನಿ ಅಲ್ಲಿಯೇ ಇದ್ದರು ಎನ್ನಲಾಗಿದೆ.

ಏತನ್ಮಧ್ಯೆ, ಈ ಕುರಿತು ಟೆಹ್ರಾನ್‌ನಿಂದ ಕೂಡ ಯಾವುದೇ ಅಧಿಕೃತ ದೃಢೀಕರಣ ಬಂದಿಲ್ಲ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !