February 28, 2026
Saturday, February 28, 2026
spot_img

ಇರಾನ್ ಗೆ ಮತ್ತೊಂದು ಹೊಡೆತ: ಇಸ್ರೇಲ್ ದಾಳಿಗೆ ರಕ್ಷಣಾ ಸಚಿವ, ಗಾರ್ಡ್ಸ್ ಕಮಾಂಡರ್ ಸಾವು?

ಹೊಸದಿಗಂತ ಡಿಜಿಟಲ್ ಡೆಸ್ಕ್:

ಇರಾನ್ ಮೇಲೆ ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಲ್ಲಿ ಇರಾನ್‌ನ ರಕ್ಷಣಾ ಸಚಿವ ಮತ್ತು ಇರಾನ್‌ನ ಅತ್ಯಂತ ಶಕ್ತಿಶಾಲಿ ಮಿಲಿಟರಿ ಘಟಕವಾದ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಕಮಾಂಡರ್ ಬಲಿಯಾಗಿದ್ದಾರೆ ಎಂದು ವರದಿಗಳು ತಿಳಿಸಿವೆ.

ಈ ಹತ್ಯೆಯನ್ನು ಇಸ್ರೇಲ್ ಮಾಧ್ಯಮಗಳು ದೃಢಪಡಿಸಿವೆಯಾದರೂ, ಇರಾನ್ ಸರ್ಕಾರವು ಈ ಬಗ್ಗೆ ಇನ್ನೂ ಅಧಿಕೃತ ಹೇಳಿಕೆ ನೀಡಿಲ್ಲ. ಆದರೆ, ರಕ್ಷಣಾ ಸಚಿವರು ಸಂಪರ್ಕಕ್ಕೆ ಸಿಗುತ್ತಿಲ್ಲ ಎಂದು ಕೆಲವು ಮೂಲಗಳು ತಿಳಿಸಿವೆ.

ಈ ಘಟನೆಯ ಬೆನ್ನಲ್ಲೇ ಇರಾನ್ ಕೂಡ ಇಸ್ರೇಲ್ ಮತ್ತು ಕತಾರ್, ಬಹ್ರೇನ್‌ನಲ್ಲಿರುವ ಅಮೆರಿಕದ ಮಿಲಿಟರಿ ನೆಲೆಗಳ ಮೇಲೆ ಕ್ಷಿಪಣಿ ಮಳೆಗರೆದಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !